ವಿಜಯಪುರ 06 : ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನಗರದ ಅಂಬೇಡ್ಕರ್ ವೃತ್ತದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರೆ್ಣ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕೃಷಿ ಜಂಟಿ ನಿರ್ದೇಶಕರಾದ ಎಲ್.ರೂಪಾ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪುಂಡಲಿಕ ಮಾನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.