ಏ.14 ರಂದು ಡಾ. ಬಾಬಾಸಾಹೇಬ ಅಂಬೇಡ್ಕರ ರವರ 134ನೇ ಜಯಂತಿ ಸಮಾರಂಭ

Dr. Babasaheb Ambedkar's 134th birth anniversary celebration on April 14

ಬೆಳಗಾವಿ, ಏ.11:  ತಾಲೂಕ ಆಡಳಿತ, ತಾಲೂಕ ಪಂಚಾಯತಿ, ಪುರಸಭೆ, ಹಾಗೂ ಸಮಾಜ ಕಲ್ಯಾಣ ಇಲಾಖೆ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ (ಏ.14) ಬೆಳಿಗ್ಗೆ 10.30 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಬೈಲಹೊಂಗಲದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾವಾದಿ ಡಾ. ಬಾಬಾಸಾಹೇಬ ಅಂಬೇಡ್ಕರ ರವರ 134ನೇ ಜಯಂತಿ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. 

ಕರ್ನಾಟಕ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ  ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದು ಶಾಸಕರಾದ ಬಾಬಾಸಾಹೇಬ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆರ್‌.ಪಿ.ಡಿ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಚ್‌.ಬಿ.ಕೋಲ್ಕಾರ ಹಾಗೂ ದ್ಯಾನೇಶ್ವರ ರಾಯಪ್ಪಗೋಳ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಶ ನೀಡಲಿದ್ದಾರೆ. 

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕಲರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ ಕಾಗೆ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ ಹುಕ್ಕೇರಿ, ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಸಭಾ ಸಂಸದರಾದ ಈರಣ್ಣ ಕಡಾಡಿ, ವಿಧಾನ ಪರಿಷತ್ ಶಾಸಕರಾದ ಚನ್ನರಾಜ ಹಟ್ಟಿಹೊಳಿ, ಲಖನ ಜಾರಕಿಹೊಳಿ, ಹಣಮಂತ ನಿರಾಣಿ, ಬೈಲಹೊಂಗಲ ಪುರಸಭೆ ಅಧ್ಯಕ್ಷರಾದ ವಿಜಯ ಬೋಳಣ್ಣವರ, ಉಪವಿಭಾಗಾಧಿಕಾರಿ ಪ್ರಭಾವತಿ ಎಫ್, ಡಿ.ವಾಯ್‌.ಎಸ್‌.ಪಿ ರವಿ ನಾಯ್ಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.