ಸಮಾನತೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟ ಡಾ. ಬಾಬಾಸಾಹೇಬ ಅಂಬೇಡ್ಕರ್

ಸಮಾನತೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟ ಡಾ. ಬಾಬಾಸಾಹೇಬ ಅಂಬೇಡ್ಕರ್  Dr. Babasaheb Ambedkar gave great importance to equality and education

ಲೋಕದರ್ಶನ ವರದಿ 

         ಗಂಗಾವತಿ 15: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಂಪೂರದಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ಅವರ ಜಯಂತಿಯನ್ನು ಅತ್ಯಂತ ಗೌರವಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ​‍್ರೊಫೆಸರಿ್್ಜತ್ನಾಗರಾಳೆ ಅವರು ಅಂಬೇಡ್ಕರರ ಜೀವನ ಚರಿತ್ರೆ, ಅವರು ನಡೆದು ಬಂದ ಹಾದಿ ಹಾಗೂ ತಮ್ಮ ಜೀವನದಲ್ಲಿ ಎದುರಿಸಿದ ಅನೇಕ ಸಂಕಷ್ಟಗಳು ಮತ್ತು ಸಾಮಾಜಿಕ ಅಡೆತಡೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಬಾಲ್ಯದಿಂದಲೇ ಅನೇಕ ಅನ್ಯಾಯಗಳು ಮತ್ತು ಅವಮಾನಗಳನ್ನು ಎದುರಿಸಿದ್ದರೂ, ತಮ್ಮ ದೃಢಸಂಕಲ್ಪ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಅಪಾರ ಆಸಕ್ತಿಯಿಂದ ಅವರು ಉನ್ನತ ವಿದ್ಯಾಭ್ಯಾಸವನ್ನು ಪಡೆದು ದೇಶದ ಮಹಾನ್ಚಿಂತಕರಾಗಿ ಹೊರಹೊಮ್ಮಿದ ಬಗ್ಗೆ ವಿವರಿಸಿದರು.  

 ಅವರು ಭಾರತದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಲಪಡಿಸಲು ಶ್ರಮಿಸಿದ ಮಹಾನ್ನಾಯಕರು ಎಂದು ತಿಳಿಸಿದರು. ವಿಶೇಷವಾಗಿ ಭಾರತ ಸಂವಿಧಾನದ ರಚನೆಯಲ್ಲಿ ಅಂಬೇಡ್ಕರ್ ಅವರ ಮಹತ್ವದ ಪಾತ್ರವನ್ನು ವಿವರಿಸುತ್ತಾ, ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳು ಮತ್ತು ನ್ಯಾಯವನ್ನು ಒದಗಿಸುವ ಅತ್ಯಂತ ಮಹತ್ವದ ದಾಖಲೆ ಎಂಬುದನ್ನು ತಿಳಿಸಿದರು. ಸಮಾಜದಲ್ಲಿ ಅಸಮಾನತೆ ಮತ್ತು ಅಜ್ಞಾನ ನಿವಾರಣೆಗೆ ಶಿಕ್ಷಣವೇ ಶ್ರೇಷ್ಠ ಮಾರ್ಗವೆಂದು ಅಂಬೇಡ್ಕರ್ ಅವರು ನೀಡಿದ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಪ್ರೇರೇಪಿಸಿದರು.  ಈ ಸಂದರ್ಭದಲ್ಲಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್‌. ಎಸ್‌. ಮೇಟಿ ಅವರು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಎಲ್ಲಾ ಬೋಧಕ ಹಾಗೂ ಬೋಧ ಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬೇಡ್ಕರ್ ಅವರಿಗೆ ಗೌರವಸಲ್ಲಿಸಿದರು.