ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ

ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ Dr. Babu Jagjivan Ram's 119th birth anniversary

ಲೋಕದರ್ಶನ ವರದಿ 

         ಹಾವೇರಿ 7 : ಡಾ.ಬಾಬು ಜಗಜೀವನರಾಮ್ ಅವರು ಈ ದೇಶದ ಉಪ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕ ಹಾಗೂ  ಕೃಷಿ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಹಸಿರು ಕ್ರಾಂತಿ ಹರಿಕಾರ ಎಂದು  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್‌.ಗಾಜಿಗೌಡ್ರ ಅವರು ಬಣ್ಣಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರವಿವಾರ ಸಾಂಕೇತಿವಾಗಿ ಆಯೋಜಿಸಲಾದ ಡಾ.ಬಾಬು ಜಗಜೀವನರಾಂ ಅವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ  ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ  ಅವರು ಮಾತನಾಡಿದರು.  

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧಾ ವಂಟಗೋಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿ.ಪಂ.ಉಪಕಾರ್ಯದರ್ಶಿ ಡಾ.ಪುನಿತ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕರು, ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಮುಖಂಡರು  ಇತರರು ಉಪಸ್ಥಿತರಿದ್ದರು.  ವಸತಿ ಶಾಲೆಗಳ ಪ್ರವೇಶ ಪರೀಕ್ಷೆ  ಪ್ರವೇಶ ಪತ್ರ ಪಡೆಯಲು ಸಲಹೆ