ಜನಸಂಪರ್ಕ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿ
Dr. Babu Jagjivanram Jayanti at the Public Relations Office
ಲೋಕದರ್ಶನ ವರದಿ
ಹಾನಗಲ್ 06 : ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಡಾ.ಬಾಬು ಜಗಜೀವನರಾಂ ಅವರು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ನಾಯಕ. ಅವರು ಆದರ್ಶಗಳು ಎಂದೆಂದಿಗೂ ದಾರೀದೀಪವಾಗಿವೆ.
ತಮ್ಮ ಜೀವನಪೂರ್ತಿ ಅಸಮಾನತೆ, ಅಸ್ಪೃಶ್ಯತೆಯ ನಿವಾರಣೆಗೆ ಶ್ರಮಿಸಿದ್ದು ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಇಂದಿನ ಯುವ ಸಮೂಹ ಅವರ ಜೀವನದಿಂದ ಪ್ರೇರಣೆ ಪಡೆದು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಮುಂದಾಗಬೇಕಿದೆ ಎಂದರು. ಪುರಸಭೆ ಮಾಜಿ ಉಪಾಧ್ಯಕ್ಷ ಮಹೇಶ ಪವಾಡಿ, ಮುಖಂಡರಾದ ಗುರುರಾಜ್ ನಿಂಗೋಜಿ, ಆದರ್ಶ ಶೆಟ್ಟಿ, ರವಿ ದೇಶಪಾಂಡೆ, ಮುನ್ನಾ ನಾಯ್ಕ, ಉಮೇಶ ಮಾಳಗಿ, ಮೇಕಾಜಿ ಕಲಾಲ, ಪ್ರಕಾಶ ಬಣಕಾರ, ಮಾರುತಿ ಹಂಜಗಿ, ನೌಶಾದ ರಾಣೇಬೆನ್ನೂರು, ಮೌನೇಶ ಕಲಾಲ, ಖಂಡೋಜಿ ಬೋಸ್ಲೆ, ಮರ್ದಾನಸಾಬ ಬಡಗಿ ಸೇರಿದಂತೆ ಪೌರಕಾರ್ಮಿಕರು, ಮುಖಂಡರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 