ಡಾ. ಕುರಿ ಅವರಿಗೆ ಬೆಸ್ಟ್ ಡಾಕ್ಟರ್ ಅವಾರ್ಡ್

ಗುಳೇದಗುಡ್ಡ27: ಗುಳೇದಗುಡ್ಡದ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಹಾಗೂ ಸ್ತ್ರೀ ರೋಗ ತಜ್ಞ  ಡಾ. ನಾಗರಾಜ ಕುರಿ ಅವರಿಗೆ 71 ನೇ ಗಣರಾಜ್ಯೋತ್ಸವ ನಿಮಿತ್ಯ ಬಾಗಲಕೋಟೆಯ ಜಿಲ್ಲಾಡಳಿತದ  ವತಿಯಿಂದ ಭಾನುವಾರ  ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉತ್ತಮ ವೈದ್ಯಕೀಯ ಸೇವೆಗಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ  ಬೆಸ್ಟ್ ಡಾಕ್ಟರ್ ಅವಾರ್ಡ್  ನೀಡಿ  ಗೌರವಿಸಿದರು. 

      ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಉಪಾಧ್ಯಕ್ಷ ಮುತ್ತಪ್ಪ ಕೋಮಾರ , ಬಾಗಲಕೋಟ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಇತರರು ಇದ್ದರು.