ವೈದ್ಯರ ದಿನಾಚರಣೆಯಲ್ಲಿ ಡಾ. ಧನಪಾಲ್ ಹೆಗಡೆಗೆ ಸನ್ಮಾನ
Dr. Dhanapal Hegde felicitated on Doctors' Day
ಹುಬ್ಬಳ್ಳಿ ಜುಲೈ 5: ವೈದ್ಯರ ದಿನಾಚರಣೆ ಅಂಗವಾಗಿ ನಗರದ ಶಾರದಾ ಕ್ಲಿನಿಕ್ ಮೂಲಕ ಮೂರು ದಶಕಕ್ಕೂ ಹೆಚ್ಚು ಕಾಲ ಸಾವಿರಾರು ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವ ಖ್ಯಾತ ವೈದ್ಯ ಡಾ. ಧನಪಾಲ್ ಹೆಗಡೆ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು. ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು ಹೊದಿಸಿ, ಗ್ರಂಥ ನೀಡಿ ಹಾಗೂ ಮಾಲಾರೆ್ಣ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಂಥಪಾಲಕ ಡಾ. ಸುರೇಶ್ ಡಿ. ಹೊರಕೇರಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಧನಪಾಲ್ ಹೆಗಡೆ ಅವರ ಸೇವೆ, ಅನುಭವ ಹಾಗೂ ರೋಗಿಗಳತ್ತ ಅವರ ಮಾನವೀಯ ಮತ್ತು ಸೇವಾಭಾವದ ಚಿಕಿತ್ಸಾ ವಿಧಾನವನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ಡಾ. ಧನಪಾಲ್ ಹೆಗಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 