ಡಾ. ಜಿ. ಪರಮೇಶ್ವರ ನಮ್ಮವರೇ. ಡಿಸಿಎಂ ಸ್ಥಾನ ಸಿಕ್ಕಿದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ
Dr. G. Parameshwara is ours. We should be satisfied with getting the DCM post: Minister Satish Jarki
ಬೆಳಗಾವಿ 08: ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ ಮತ್ತು ಎಲ್ಲರಿಗೂ ಒಂದೇ ಬಾರಿಗೆ ಎಲ್ಲವೂ ಸಿಗಲು ಸಾಧ್ಯವಿಲ್ಲ, ಡಿಸಿಎಂ ಜಿ. ಪರಮೇಶ್ವರ ಅವರು ನಮ್ಮವರೇ. ಹೈಕಮಾಂಡ್ ಅವರಿಗೆ ಜವಾಬ್ದಾರಿ ನೀಡಿದೆ, ಅಷ್ಟಕ್ಕೇ ನಾವು ತೃಪ್ತಿಪಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಒಬ್ಬರಿಗೆ ಒಂದು ಸ್ಥಾನ ಎನ್ನುವ ಕಾರಣದಿಂದ ಅಧ್ಯಕ್ಷ ಸ್ಥಾನ ಸಿಗಲಿಲ್ಲ.
ಈ ಹಿಂದೆ ಇಂತಹ ಪರಿಸ್ಥಿತಿ ಇರಲಿಲ್ಲ, ಆದರೆ ಈಗ ಪಕ್ಷದ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು ಎಂದು ತಿಳಿಸಿದರು.ಇನ್ನು ಡಾ. ಜಿ. ಪರಮೇಶ್ವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರೆಯುವಲ್ಲಿ ಸಿದ್ದರಾಮಯ್ಯನವರ ಪ್ರಯತ್ನ ಮತ್ತು ಬೆಂಬಲ ಪ್ರಮುಖ ಕಾರಣ. ಸಿದ್ದರಾಮಯ್ಯನವರು ತಮ್ಮ ಒಡನಾಡಿಗಳು ಮತ್ತು ಪಕ್ಷದ ಹಿರಿಯ ನಾಯಕರಿಗೆ ಸೂಕ್ತ ಸ್ಥಾನಮಾನ ಕೊಡಿಸಲು ಸದಾ ಶ್ರಮಿಸಿದ್ದಾರೆ ಎಂಬುದನ್ನು ಒತ್ತಿ ಹೇಳಿದರು.ಶೋಷಿತ ಸಮುದಾಯಗಳನ್ನು ಟಾರ್ಗೆಟ್ ಮಾಡುವುದು ಇದೇ ಮೊದಲಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ನಮಗೆ ಸಿಗಬೇಕಾದ ಪ್ರಾಮುಖ್ಯತೆ ಸಿಕ್ಕಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ವಿರೋಧಿಗಳು ಅವಕಾಶ ಸಿಕ್ಕಾಗಲೆಲ್ಲಾ ಅಪಪ್ರಚಾರ ಮಾಡುವುದು ಸಹಜ ಎಂದು ಅವರು ಹೇಳಿದ್ದಾರೆ. ಶೋಷಿತ ಸಮುದಾಯಗಳು ಹಲವು ಬಾರಿ ಟಾರ್ಗೆಟ್ ಆಗಿವೆ. ಶೋಷಿತರನ್ನು ಗುರಿಯಾಗಿಸುವುದು ಇದೇ ಮೊದಲಲ್ಲ. ವಿರೋಧಿಗಳು ಸಿಕ್ಕಾಗಲೆಲ್ಲಾ ಅಪಪ್ರಚಾರ ಮಾಡುವುದು ಸಹಜ. ಪಕ್ಷದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ನಮಗೆ ಸಿಗಬೇಕಾದ ಪ್ರಾಮುಖ್ಯತೆ ಖಂಡಿತ ಸಿಕ್ಕಿದೆ. ನೀರೀಕ್ಷೆ ಮೀರಿ ಪಕ್ಷ ನಮ್ಮನ್ನು ಪರಿಗಣಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿದರೆ ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ 40 ಸೀಟುಗಳನ್ನೂ ಗೆಲ್ಲಲು ಸಾಧ್ಯವಿಲ್ಲ ಎಂಬ ಎಂಎಲ್ಸಿ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಲಖನ್ ಜಾರಕಿಹೊಳಿ ಅಷ್ಟೇ ಈ ಹೇಳಿಕೆ ನೀಡಿಲ್ಲ,
ಬಿಜೆಪಿಯ ಹಲವರು ಹೇಳಿದ್ದಾರೆ. ಲಖನ್ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ನಿಲುವು. ಈ ಹೇಳಿಕೆ ಬಗ್ಗೆ ನೀವು ಅವರನ್ನೇ ಕೇಳಿ ಎಂದರು.ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದಕ್ಕೆ ನಿಮ್ಮ ಕಾರ್ಯಕರ್ತರು ನಿರಾಶೆ ಆಗಿದ್ದಾರೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ತಾಳ್ಮೆಯಿಂದ ಕಾಯ್ದವರಿಗೆ ಯಾವಾಗಲೂ ಒಳ್ಳೆಯ ಅವಕಾಶ ಸಿಕ್ಕಿದೆ. ಕಾಲ ಇನ್ನೂ ಮಿಂಚಿಲ್ಲ, ಪಕ್ಷಕ್ಕಾಗಿ ಶ್ರಮಿಸುವ ಮತ್ತು ತಾಳ್ಮೆಯಿಂದ ಇರುವ ನಾಯಕರಿಗೆ ಸೂಕ್ತ ಸಮಯದಲ್ಲಿ ಹೈಕಮಾಂಡ್ ಮನ್ನಣೆ ನೀಡಲಿದೆ. ನನಗೂ ಪಕ್ಷ ಒಳ್ಳೆಯ ಸ್ಥಾನ ನೀಡಿದೆ. ಕಾರ್ಯಕರ್ತರು ಧೃತಿಗೆಡಬೇಕಾದ ಅಗತ್ಯವಿಲ್ಲ ಎಂದು ಧೈರ್ಯ ತುಂಬುವ ಮಾತುಗಳನ್ನಾಡಿದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 