ಡಾ.ಎಚ್.ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನದ ಕನ್ನಡ ಗೀತ ಗಾಯನ ದತ್ತಿ ಕಾರ್ಯಕ್ರಮ
Dr. H.F. Kattimani Secondary Education Foundation's Kannada Song and Singing Endowment Program
ಧಾರವಾಡ 25: ಕಿರಾಣಾ ಘರಾಣಾ ಗಾಯನ ಶೈಲಿಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಹೆಸರಾಂತ ಗಾಯಕರಾದ ಪದ್ಮಭೂಷಣ ಪಂಡಿತ ಬಸವರಾಜ ರಾಜಗುರು ಅವರ ಮೇರು ಶಿಷ್ಯರಲ್ಲಿ ಒಬ್ಬರಾಗಿದ್ದ ಷಣ್ಮುಖಾನಂದ ಗೊಜನೂರ ಅವರು ಕೋಮಲ ಕಂಠದ ಗಾಯಕರಾಗಿ ಗಮನಸೆಳೆದಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ತನಿಖಾಧಿಕಾರಿ ಮಹಾಂತೇಶ ಗುಡಿಹಾಳ ಹೇಳಿದರು.
ಅವರು ಶಾಲಾ ಶಿಕ್ಷಣ ಇಲಾಖೆಯ ಡಾ. ಎಚ್. ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಹರ ವಲಯದ ಬಿಇಓ ಕಚೇರಿ, ನಗರದ ಶ್ರೀಸಿದ್ಧರಾಮೇಶ್ವರ ಬಿ.ಇಡಿ. ಕಾಲೇಜು ಸಂಯುಕ್ತ ಆಶ್ರಯದಲ್ಲಿ ಹಿಂದೂಸ್ತಾನಿ ಗಾಯಕರಾಗಿದ್ದ ಷಣ್ಮುಖಾನಂದ ಗೊಜನೂರ ಸ್ಮರಣಾರ್ಥ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಬಿ.ಇಡಿ. ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಡು, ನುಡಿ, ಸಂಸ್ಕೃತಿ ಬಿಂಬಿಸುವ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮ ನಾಡಿನ ವಿವಿಧ ಕ್ಷೇತ್ರಗಳ ಉನ್ನತ ವ್ಯಕ್ತಿತ್ವಗಳ ಆದರ್ಶಗಳನ್ನು ಅರಿತು ಒಂದು ಮಹೋನ್ನತ ಗುರಿ ಸಾಧನೆಗೆ ವಿದ್ಯಾರ್ಥಿಗಳು ಆಸಕ್ತಿಯ ಅಧ್ಯಯನ ಮಾಡಬೇಕು ಎಂದರು.
ಶ್ರೀಸಿದ್ಧರಾಮೇಶ್ವರ ಬಿ.ಇಡಿ. ಕಾಲೇಜಿನ ಪ್ರಿನ್ಸಿಪಾಲ್ ಡಾ. ಗಿರಿಜಾ ಹಿರೇಮಠ ಅಧ್ಯಕ್ಷತೆವಹಿಸಿದ್ದರು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 20 ಪ್ರೌಢಶಾಲೆಗಳ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಗೀತ ಗಾಯನ ಪ್ರಸ್ತುತಪಡಿಸಿದರು. ಸಂಗೀತ ಉಪನ್ಯಾಸಕಿ ಡಾ. ಅರ್ಚನಾ ಸುತಾರ, ಸಂಪನ್ಮೂಲ ವ್ಯಕ್ತಿ ಅರುಂಧತಿ ಸವದತ್ತಿ ಹಾಗೂ ಡಯಟ್‌ನ ರೋಹಿಣಿ ದಾನಿ ತೀರ್ುಗಾರರಾಗಿ ಪಾಲ್ಗೊಂಡು ಫಲಿತಾಂಶ ಪ್ರಕಟಿಸಿದರು. ವಿಜೇತ ಮಕ್ಕಳಿಗೆ ಪುಸ್ತಕ ಬಹುಮಾನ ನೀಡಲಾಯಿತು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೆ ಪ್ರಮಾಣಪತ್ರ ನೀಡಿ ಪ್ರೊತ್ಸಾಹಿಸಲಾಯಿತು.
ದತ್ತಿ ದಾನಿಗಳಾದ ಅನ್ನಪೂರ್ಣ ಗೊಜನೂರ, ವಿನಯಾ ಗೊಜನೂರ, ಬಿ.ಇಡಿ. ಕಾಲೇಜಿನ ಡಾ.ಕೆ.ಆರ್.ಹೀರೆಮಠ, ಗಂಗಾಧರ ಜೋಗಿ, ಜ್ಯೋತಿ ಬಾಳಗಿ, ಹುಸೇನ್ ಪಟೇಲ್, ಅನ್ನದಾನೇಶ್ವರಿ ಕೊಟೂರು, ಡಾ.ಎಚ್.ಎಫ್.ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನದ ಜಯಶ್ರೀ ವಡವಡಗಿ ಇತರರು ಇದ್ದರು. ಆರಂಭದಲ್ಲಿ ಗಾಯಕ ಷಣ್ಮುಖಾನಂದ ಗೊಜನೂರ ಅವರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಲಾಯಿತ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 