ಡಾ.ಎಚ್.ಕೆ.ಪಾಟೀಲ ಜಿಲ್ಲ ಪ್ರವಾಸ
Dr. H.K. Patil's district tour
ಗದಗ 19: ರಾಜ್ಯದ ಕಾನೂನು, ನ್ಯಾಯ,ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸೆಪ್ಟೆಂಬರ್ 20 ಹಾಗೂ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ವಿವರ ಇಂತಿದೆ.
ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 11.10 ಗಂಟೆಗೆ ಹುಬ್ಬಳ್ಳೀ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಸಿರಗುಪ್ಪಿ, ಅಣ್ಣಿಗೇರಿ, ಹುಲಕೋಟಿ ಮಾರ್ಗವಾಗಿ ಬೆಳಿಗ್ಗೆ 11.40 ಗಂಟೆಗೆ ಗದುಗಿಗೆ ಆಗಮಿಸುವರು. ಗದಗ ಮುಳಗುಂದೆ ರಸ್ತೆಯಲ್ಲಿನ ಕನಕ ಭವನ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಗದಗ ತಾಲೂಕು ಕುರುಬರ ಸಂಘ ( ರಿ) ಗದಗ ವತಿಯಿಂದ ಆಯೋಜಸಿರುವ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘ ಜೀವಿ ಶ್ರೀ ಫಕೀರ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರೆ್ಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಮತ್ತು ಗದಗನಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಗದಗ ವಾರ್ಡ ನಂ. 30 ವಾಂಬೆ ಬಡಾವಣೆಯಲ್ಲಿ ರಾಜಕಾಲುವೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11 ಗಂಟೆಗೆ ಗದಗ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿನ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಹಾಗೂ ದೇಶವ್ಯಾಪಿ ಮತಕಳ್ಳತನ ನಿಲ್ಲಿಸಿ ಸಹಿ ಸಂಗ್ರಹಣಾ ಅಭಿಯಾನ ಕುರಿತು ಪೂರ್ವಭಾವಿ ಸಭೆ ಜರುಗಿಸುವರು. ಮಧ್ಯಾಹ್ನ 12 ಗಂಟೆಗೆ ಗದಗ ಬೆಟಗೇರಿ ಅವಳಿ ನಗರದ ವಾರ್ಡ ನಂ. 16 ರಲ್ಲಿ ಸಿಸಿ ರಸ್ತೆ , ಹಾಗೂ ವಾರ್ಡ ನಂ. 17 ಮತ್ತು 18 ರಲ್ಲಿ ಗೌರವ ಘಟಕದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಹುಲಕೋಟಿಯಲ್ಲಿ 2023-24 ನೇ ಸಾಲಿನ ಆರ್.ಐ.ಡಿ.ಎಫ್. ಟ್ರಾಂಚ್ -29 ರ ಅಡಿ ನಿರ್ಮಾಣಗೊಂಡಿರುವ ನೂತನ ರೈತ ಸಂಪರ್ಕ ಕೇಂದ್ರದ ಗೋದಾಮು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 9 ಗಂಟೆಗೆ ಗದಗಿನಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣಿಸಿ ಅಲ್ಲಿಂದ ಬೆಂಗಳೂರಿಗೆ ಹೊರಡುವರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 