ಇಬ್ರಾಹಿಂ ಕುದುರಿಮೋತಿ ಅವರಿಗೆ ಡಾಕ್ಟರೇಟ್ ಪ್ರಧಾನ ಪ್ರಧಾನ
ಕೊಪ್ಪಳ 03: ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಪ್ರಾಧ್ಯಾಪಕರಾದ ಇಬ್ರಾಹಿಂ ಕುದುರಿಮೋತಿ ಅವರಿಗೆ ಆಂದ್ರ್ರದೇಶದ ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪ್ರಧಾನ ಮಾಡಿದೆ.
ಇಬ್ರಾಹಿಂ ಅವರು ದ್ರಾವಿಡ ವಿಶ್ವವಿದ್ಯಾಲಯದಲ್ಲಿ ಪಿ.ಎಚ್.ಡಿಗೆ ನೊಂದಾಯಿಸಿ ಹಿರಿಯ ಇತಿಹಾಸ ಸಂಶೋಧಕ ಹಾಗೂ ಗಂಗಾವತಿಯ ಕಲ್ಮಠ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ ಅವರ ಮಾರ್ಗದರ್ಶನದಲ್ಲಿ ಆನೆಗೊಂದಿ : ಹಿಸ್ಟರಿ ಆ್ಯಂಡ್ ಆರ್ಟ್ ಎನ್ನುವ ವಿಷಯದ ಪಿಎಚ್.ಡಿ ಸಂಶೋಧನಾ ಪ್ರಬಂಧವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದರು.
ಸದರಿ ಪ್ರಬಂಧಕ್ಕೆ ವಿಶ್ವವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಇಬ್ರಾಹಿಂ ರವರ ಈ ಸಾಧನೆಗೆ ಅವರ ಸ್ನೇಹಿತರ ಬಳಗ ,ಜಿಲ್ಲೆಯ ವಿವಿಧ ಸರ್ಕಾರಿ ಪ್ರಥಮ ದರ್ಜೆ ಪ್ರಾಂಶುಪಾಲರುಗಳು ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಳೆಯ ವಿದ್ಯಾರ್ಥಿಗಳು ಹಾಗೂ ಅವರ ಬಂಧುಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.