ರಾಷ್ಟ್ರೀಯ ಬಿಎಜೆಎಸ್‌ಎಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಡಾ. ಕುಬೇರ್ಪ ಆಯ್ಕೆ
Dr. Kuberpa elected as Vice President of National BAJSS Organization
ರಾಣೇಬೆನ್ನೂರು 24: ನವದೆಹಲಿಯಲ್ಲಿ ಭಾರತೀಯ ಆದಿಮ ಜಾತಿ ಸೇವಕ ಸಂಘದ 78ನೇ ವಾರ್ಷಿಕೋತ್ಸವ ರಾಷ್ಟ್ರೀಯ ಕಾರ್ಯಕಾರಣಿ ಹಾಗೂ ಪರಿಷತ್ ಸಭೆ ನಡೆಯಿತು. ನಂತರ ನಡೆದ ರಾಷ್ಟ್ರೀಯ ಪದಾಧಿಕಾರಿಗಳ ಚುನಾವಣೆಯಲ್ಲಿ ಡಾ. ಆರ್. ಎಂ. ಕುಬೇರ್ಪ ಅವರು ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಬಿ ಎ ಜೆಎಸ್‌ಎಸ್ ಸಂಸ್ಥೆಯು ರಾಷ್ಟ್ರಮಟ್ಟದ ಸಂಸ್ಥೆಯಾಗಿದ್ದು, ದೇಶದ 28 ರಾಜ್ಯಗಳಲ್ಲಿ ವಿವಿಧ ರೂಪದಲ್ಲಿ ಸಂಘ ಸಂಸ್ಥೆಗಳನ್ನು ನಡೆಸುತ್ತಿದ್ದು ದೇಶದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ಪರಿಗಣಿಸಲಾಗಿದೆ.
ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಮಧ್ಯಪ್ರದೇಶದ ನಿವೃತ್ತ ನ್ಯಾಯಾಧೀಶರು ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಪ್ರಥಮ ಬಾರಿಗೆ ಕರ್ನಾಟಕದ ಶಿಕ್ಷಣ ತಜ್ಞ, ಡಾ.ಆರ್.ಎಂ.ಕುಬೇರ್ಪ ಅವರನ್ನು ಆಯ್ಕೆ ಮಾಡಿರುವುದಾಗಿ ಸಂಸ್ಥೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಕುಬೇರ್ಪ ಅವರಿಗೆ ಕರ್ನಾಟಕ ವಿಧಾನ ಸಭೆಯ ಉಪಾಧ್ಯಕ್ಷ ರುದ್ರ್ಪ ಲಮಾಣಿ, ಆಡಳಿತ ಮಂಡಳಿಯ ಸದಸ್ಯರು ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ಮುಖ್ಯಸ್ಥರು, ಪ್ರಾಚಾರ್ಯರು ಉಪನ್ಯಾಸಕರು ಮತ್ತು ಶಿಕ್ಷಕರು ಸೇರಿದಂತೆ ಮತ್ತಿತರರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 