ಡಾ. ಲಿಂಗರಾಜ ಸಿ. ಮುಳ್ಳಳ್ಳಿಗೆ ಸನ್ಮಾನ
Dr. Lingaraj C. Mullally felicitated
ಹುಬ್ಬಳ್ಳಿ 12: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಕೆ.ಎಲ್.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಳೆದ 35ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ, ಆತ್ಮೀಯರು, ಮಾರ್ಗದರ್ಶಕರು, ಹಿತೈಸಿಗಳಾದ ಡಾ. ಲಿಂಗರಾಜ ಸಿ. ಮುಳ್ಳಳ್ಳಿ ಅವರು ಕರ್ನಾಟಕ ವಿಶ್ವವಿದ್ಯಾಲಯದ ನೂತನ ಸಿಂಡಿಕೇಟ ಸದಸ್ಯರಾಗಿ ನಾಮ ನಿರ್ಧೇಶನಗೊಂಡ ಶುಭ ಸಂದರ್ಭದಲ್ಲಿ ಕೆ.ಎಲ್.ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಲಿಂಗರಾಜ ಸಿ. ಮುಳ್ಳಳ್ಳಿ ಅವರನ್ನು ಮನೆಯಲ್ಲಿ ಭೇಟಿ ಮಾಡಿ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಗ್ರಂಥ ನೀಡಿ, ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು. ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಶುಭಕೋರಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ನಿವೃತ್ ಶಿಕ್ಷಕ ಎಸ್.ಐ ನೇಕಾರ, ಗೀತಾ ಲಿಂಗರಾಜ ಮುಳ್ಳಳ್ಳಿ, ಚನ್ನಬಸಪ್ಪ ಧಾರವಾಡ ಶೆಟ್ಟರ, ಬಸವರಾಜ ಮುಳ್ಳಳ್ಳಿ, ವಿನಾಯಕ ಮುಳ್ಳಳ್ಳಿ, ಡಾ.ಲತಾಕೊಪರ್ಡೆ, ಸುಧೀರ ಕಾಕಡೆ, ರವಿ ಕಾಕಡೆ, ಸುಭಾಸ ಕಾಕಡೆ, ಚೈತ್ರಾ ಮುಳ್ಳಳ್ಳಿ, ಮೀನಾಕ್ಷೀ ಕೋಗೊಡ, ಗುರುಸಿದ್ದಮ್ಮ ಮುಳ್ಳಳ್ಳಿ, ಮುಂತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 