ಡಾ. ಎಂ ಎನ್ ಸತ್ಯನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ
Dr. M. N. Satyanarayana was awarded
ಬೆಳಗಾವಿ 03: ಬೆಂಗಳೂರಿನ ಚಿತ್ರಸಂತೆಯಿಂದ ಸಂಗೀತ ಕ್ಷೇತ್ರದಲ್ಲಿ 17 ವರ್ಷಗಳಿಂದ ಮಕ್ಕಳಿಗೆ ನಾದಸುಧಾ ಸುಗಮ ಸಂಗೀತಾ ಶಾಲೆಯ ಮೂಲಕ ಸಂಗೀತವನ್ನು ಧಾರೆಯುತ್ತಿರುವ ಬೆಳಗಾವಿಯ ಡಾಽ ಎಂ ಎನ್ ಸತ್ಯನಾರಾಯಣ ಅವರಿಗೆ ಬೆಂಗಳೂರಿನ ಚಿತ್ರಸಂತೆಯವರು ಹೈಡ್ ಪಾರ್ಕ್ ನಲ್ಲಿ ಆಯೋಜಿಸಿದ್ದ ಹೆಮ್ಮೆಯ ಸಾಧಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ "ಬೆಸ್ಟ್-ಮ್ಯುಸಿಷಿಯನ್"" ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಸಿದ್ಧ ನಟಿ ಸುಧಾ ಬೆಳವಾಡಿ ಅವರು ಸೇರಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗಿರಿ ಗೌಡರ್ ಅವರ ಚಿತ್ರಸಂತೆಯ 157ನೇ ಸಂಚಿಕೆ ಬಿಡುಗಡೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಸಂಯುಕ್ತ ಹೊರನಾಡು ಅವರು ಮಾತನಾಡಿ ಕರ್ನಾಟಕದಾದ್ಯಂತ, ಬೇರೆ ಬೇರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವ ಚಿತ್ರಸಂತೆ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹಾಡಿ ಹೊಗಳಿದರು. ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿರುವ 25 ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 