ಕೆಎಲ್ಇ ಕೃಷಿ ವಿಜ್ಞಾನ ಮಹಾವಿದ್ಯಾಲಯಕ್ಕೆ ಡಾ. ಮುರುಗೇಶ್ ನಿರಾಣಿ ಭೇಟಿ
Dr. Murugesh Nirani visits KLE College of Agricultural Sciences
ಲೋಕದರ್ಶನ ವರದಿ
ನೇಸರಗಿ 01 : ರಾಜ್ಯದ ಹಿರಿಯ ಕೈಗಾರಿಕೋದ್ಯಮಿ ಹಾಗೂ ಶಿಕ್ಷಣ ಪ್ರೇಮಿ ಡಾ. ಮುರುಗೇಶ್ ನಿರಾಣಿ ಅವರು ಕೆಎಲ್ಇ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ತೆನಿಕೊಲ್ಲ ಭೇಟಿ ನೀಡಿ ಮಹಾವಿದ್ಯಾಲಯದ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಮೂಲಸೌಕರ್ಯಗಳನ್ನು ಪರೀಶೀಲಿಸಿದರು.
ಭೇಟಿಯ ಸಂದರ್ಭದಲ್ಲಿ ಅವರು ಸ್ಮಾರ್ಟ್ ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಗ್ರಂಥಾಲಯ, ವಿದ್ಯಾರ್ಥಿಗಳ ಕಲಿಕಾ ಸೌಲಭ್ಯಗಳು ಹಾಗೂ ಪ್ರಾಯೋಗಿಕ ಕೃಷಿ ಕ್ಷೇತ್ರಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಒದಗಿಸಲಾಗಿರುವ ಆಧುನಿಕ ಶೈಕ್ಷಣಿಕ ವ್ಯವಸ್ಥೆ, ಸುಸಜ್ಜಿತ ಮೂಲಸೌಕರ್ಯ ಹಾಗೂ ಸ್ವಚ್ಛ ಪರಿಸರವನ್ನು ಅವರು ಮೆಚ್ಚಿದರು.
ಕೆಎಲ್ಇ ಸಂಸ್ಥೆಯು ಶತಮಾನಕ್ಕೂ ಅಧಿಕ ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಉತ್ಕೃಷ್ಟ ಸೇವೆ ಸಲ್ಲಿಸುತ್ತಿದ್ದು, ಗುಣಮಟ್ಟದ ಶಿಕ್ಷಣ, ಮೌಲ್ಯಾಧಾರಿತ ಬೋಧನೆ ಹಾಗೂ ಸಮಾಜಮುಖಿ ಚಿಂತನೆಯ ಮೂಲಕ ವಿಶಿಷ್ಟ ಶಿಕ್ಷಣ ಪರಂಪರೆಯನ್ನು ನಿರ್ಮಿಸಿದೆ ಎಂದು ಡಾ. ನಿರಾಣಿ ಹೇಳಿದರು.
ಕೃಷಿ ಶಿಕ್ಷಣ ಕ್ಷೇತ್ರದಲ್ಲಿಯೂ ಸಂಸ್ಥೆಯು ಇದೇ ಗುಣಮಟ್ಟವನ್ನು ಮುಂದುವರಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದ ಅವರು, ವಿದ್ಯಾರ್ಥಿಗಳು ಗುಣಮಟ್ಟದ ಕೃಷಿ ತಜ್ಞರಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಮಹಾವಿದ್ಯಾಲಯದ ಅಧಿಕಾರಿಗಳು ಹಾಗೂ ಬೋಧಕ ವರ್ಗವು ಕಾಲೇಜಿನ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿಗಳ ಸಾಧನೆಗಳು, ಸಂಶೋಧನಾ ಚಟುವಟಿಕೆಗಳು ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಡಾ. ಮುರುಗೇಶ್ ನಿರಾಣಿ ಅವರು ಕೆಎಲ್ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಶೈಕ್ಷಣಿಕ ಪ್ರಗತಿ ಮತ್ತು ಮೂಲಸೌಕರ್ಯವನ್ನು ಶ್ಲಾಘಿಸಿ, ಸಂಸ್ಥೆಯು ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉನ್ನತಿಗೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಅಧಿಕಾರಿಗಳಾದ ಡಾ. ಬಿ.ಡಿ. ಬಿರಾದಾರ, ಐಸಿಎಆರ್ ಕೆಎಲ್ಇ ಕೆವಿಕೆ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ, ಕ್ಷೇತ್ರ ವ್ಯವಸ್ಥಾಪಕ ಶಂಕರಗೌಡ ಪಾಟೀಲ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 