ಡಾ.ನಾಗರಾಜ ದಂಡೋತಿಗೆ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ
Dr. Nagaraj Dandoti receives the Best NSS Officer Award
ಲೋಕದರ್ಶನ ವರದಿ
ಕೊಪ್ಪಳ, ಡಿ,10: ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ನಾಗರಾಜ ದಂಡೋತಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ನೀಡುವ 2023-24ನೇ ಸಾಲಿನ ಉತ್ತಮ ಎನ್.ಎಸ್.ಎಸ್ ಅಧಿಕಾರಿ ಪ್ರಶಸ್ತಿ ಲಭಿಸಿದೆ.
ಜೊತೆಗೆ ಮಹಾವಿದ್ಯಾಲಯದ ಬಿ.ಎ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಶಶಿಕುಮಾರ ಉಳ್ಳಾಗಡ್ಡಿ ಹಾಗೂ ಮುತ್ತಣ್ಣ ಎಂಬ ಇಬ್ಬರು ವಿದ್ಯಾರ್ಥಿಗಳಿಗೂ ಕೂಡಾ ಉತ್ತಮ ಎನ್.ಎಸ್.ಎಸ್ ಸ್ವಯಂ ಸೇವಕ ಪ್ರಶಸ್ತಿಗಳು ಲಭಿಸಿವೆ. ಸದರಿ ಪ್ರಶಸ್ತಿಗಳನ್ನು ಇದೇ ಡಿ, 17ರಂದು ವಿಶ್ವವಿದ್ಯಾಲಯದಲ್ಲಿ ನಡೆಯು ಸಮಾರಂಭದಲ್ಲಿ ಮಾನ್ಯಕುಲಪತಿಗಳು ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಪಡೆದ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ಸಕಲ ವಿದ್ಯಾರ್ಥಿ ಬಳಗ ಅಭಿನಂದಿಸಿದೆ.

ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 