ಡಾ.ಫ.ಗು.ಹಳಕಟ್ಟೆಯವರು ನಾಡು ಕಂಡ ಅಪರೂಪದ ವ್ಯಕ್ತಿ: ಉಪಾಧ್ಯಕ್ಷ ಎಸ್.ಆರ್.ಪಾಟೀಲ
Dr. Ph. Gu. Halakatti is a rare person who has seen the country: Vice President S. R. Patil
ಹಾವೇರಿ 02: ವಚನಶಾಸ್ತ್ರದ ಪಿತಾಮಹ ಎಂದೆ ಹೆಸರುವಾಸಿಯಾದ ಡಾ.ಫ.ಗು. ಹಳಕಟ್ಟೆಯವರು ಕನ್ನಡ ನಾಡು ಕಂಡ ಅಪರೂಪದ ವ್ಯಕ್ತಿ. ಇವರು ವಚನ ಸಾಹಿತ್ಯವನ್ನು ಸಂಗ್ರಹಿಸಿ ತಮ್ಮ ಸ್ವಂತ ಖರ್ಚಿನಲ್ಲಿ ಮುದ್ರಣ ಮಾಡಿ ಪ್ರಕಟಿಸಿ ವಚನ ಸಾಹಿತ್ಯವನ್ನು ಜನಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್ ಆರ್ ಪಾಟೀಲ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಬುಧವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಸವೇಶ್ವರ ಬಿ.ಇಡಿ. ಕಾಲೇಜ ಸಹಯೋಗದಲ್ಲಿ ಆಯೋಜಿಸಲಾದ ಡಾ. ಫ. ಗು ಹಳಕಟ್ಟೆಯವರ ಜನ್ಮದಿನ-ವಚನ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಡಾ. ಫ.ಗು. ಹಳಕಟ್ಟೆಯವರು ವಕೀಲರಾಗಿ, ಶಿಕ್ಷಣ, ಸಹಕಾರ, ಕೃಷಿ, ವಚನ ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ ಎಂದರು.
ಮನುಷ್ಯ ಸ್ವಾರ್ಥಿಯಾಗಿದ್ದು ಕೇವಲ ತನ್ನ ಸ್ವಾರ್ಥಕ್ಕಾಗಿ ಜೀವಿಸುತ್ತಾನೆ, ಇದನ್ನು ಬಿಟ್ಟು ಮನುಷ್ಯನಾದವನು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು.
ಸರ್ಕಾರಿ ಪದವಿಪೂರ್ವ ಮಹಿಳಾ ಕಾಲೇಜಿನ ಉಪನ್ಯಾಸಕ ಶೇಖರ ಭಜಂತ್ರಿ ಅವರು ಡಾ. ಫ. ಗು ಹಳಕಟ್ಟೆಯವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಶ ನೀಡಿದರು.
ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದರು. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಎಪ್.ಎನ್. ಗಾಜಿಗೌಡ್ರ, ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ ಎಂ ಮೈದೂರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವ್ಹಿ. ಚಿನ್ನಕಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರು ಲಿಂಗಯ್ಯ ಬಿ ಹಿರೇಮಠ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಮಾರುತಿ ಶಿಡ್ಲಾಪೂರ, ಬಸವೇಶ್ವರ ಬಿ.ಇಡಿ. ಕಾಲೇಜ ಪ್ರಾಚಾರ್ಯ ಮಂಜುನಾಥ ವಡ್ಡರ ಇತರರು ಉಪಸ್ಥತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 