ಡಾ. ಪ್ರಭಾಕರ ಕೋರೆ ಆಸ್ಪತ್ರೆಗೆ ಸಂಪೂರ್ಣ ಗುಣಮಟ್ಟದ ಮಾನ್ಯತೆ
Dr. Prabhakar Kore Hospital gets full quality accreditation
ಬೆಳಗಾವಿ 21: ನಗರದ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಪ್ರತಿಷ್ಠಿತ ರಾಷ್ಟ್ರೀಯ ಆಸ್ಪತ್ರೆಯ ಮಾನ್ಯತಾ ಮಂಡಳಿ (ಎನ್‌ಎಬಿಎಚ್)ಯಿಂದ ಸಂಪೂರ್ಣ ಗುಣಮಟ್ಟದ ಮಾನ್ಯತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಕರ್ನಲ್ ಎಂ. ದಯಾನಂದ ಅವರು ಹೇಳಿದ್ದಾರೆ.
ಎನ್‌ಎಬಿಎಚ್ ಭಾರತದಲ್ಲಿನ ಆರೋಗ್ಯ ಸೌಲಭ್ಯಗಳ ಗುಣಮಟ್ಟಕ್ಕೆ ಮಾನ್ಯತೆ ನೀಡುವ ಅಥವಾ ನಿರ್ಧರಿಸುವ ಸಂಸ್ಥೆಯಾಗಿದ್ದು, ಅತೀ ಹೆಚ್ಚು ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎನ್‌ಎಬಿಹೆಚ್ ಮಾನ್ಯತೆ ಪಡೆದ ಪ್ರಥಮ ಆಸ್ಪತ್ರೆ ಇದಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಮಾನ್ಯತೆ ಪಡೆದ ಮೊದಲ ಅತೀ ಹೆಚ್ಚು ಹಾಸಿಗೆಯುಳ್ಳ ಹಾಗೂ ಬಹುವಿಧ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದೆ. ಮಾನ್ಯತೆ ಪ್ರಕ್ರಿಯೆಯು ರೋಗಿಯ ಸುರಕ್ಷತೆ, ಸೋಂಕು ನಿಯಂತ್ರಣ, ಮೂಲಸೌಕರ್ಯ ಮತ್ತು ಆರೋಗ್ಯ ಸೇವೆಗಳ ಸಾಮರ್ಥ್ಯ ಸೇರಿದಂತೆ ವಿವಿಧ ಅಂಶಗಳನ್ನು ಪರೀಶೀಲಿಸುವ ಸಮಗ್ರ ಮೌಲ್ಯಮಾಪನ ಪ್ರಕ್ರಿಯೆಯನ್ನು ಒಳಗೊಂಡಿದೆ. ಎನ್‌ಎಬಿಎಚ್ ಸಂಸ್ಥೆಯ ತಂಡವು ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಪರೀಶೀಲಿಸಿದ ನಂತರ ನಡೆಸಿದ ಸಮಗ್ರ ಮೌಲ್ಯಮಾಪನವನ್ನು ಶ್ಲಾಘಿಸಿ ಸಂಪೂರ್ಣ ಎನ್‌ಎಬಿಎಚ್ ಮಾನ್ಯತೆ ನೀಡಿದೆ.
ಆಸ್ಪತ್ರೆಯು ಪೂರ್ಣ ಪ್ರಮಾಣದ ಎನ್‌ಎಬಿಎಚ್ ಮಾನ್ಯತೆಯನ್ನು ಪಡೆದಿರುವುದಕ್ಕೆ ಹೆಮ್ಮೆಯಾಗಿದ್ದು, ಈಗ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಸಾಮಾನ್ಯ ಜನರಿಗೆ ಅತ್ಯಾಧುನಿಕ ಹಾಗೂ ಅತ್ಯುತ್ತಮ ಗುಣಮಟ್ಟದ ರೋಗಿಗಳ ಆರೈಕೆಯನ್ನು ಕಲ್ಪಿಸಲು ನಾವು ಬದ್ಧರಾಗಿದ್ದೇವೆ. 120ಕ್ಕೂ ಅಧಿಕ ನೀತಿ ನಿರೂಪಣೆಗಳನ್ನು ಮಾಡಲಾಗಿದೆ ಎಂದು ಡಾ. ಕರ್ನಲ್ ಎಂ. ದಯಾನಂದ ಅವರು ಹೇಳಿದ್ದಾರೆ.
ಎನ್‌ಎಬಿಎಚ್ ಎಂದರೇನು? : ಎನ್‌ಎಬಿಎಚ್ ಎಂದರೆ ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಆಫ್ ಹಾಸ್ಪಿಟಲ್ಸ್ ಮತ್ತು ಹೆಲ್ತ್ಕರ್ ಪ್ರೊವೈಡರ್ಸ. 2005ರಲ್ಲಿ ಸ್ಥಾಪಿತವಾದ ಈ ಸಂಸ್ಥೆಯು ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣೆ ಒದಗಿಸುವವರಿಗೆ ರಾಷ್ಟ್ರೀಯ ಮಾನ್ಯತೆ ನೀಡುವ ಮಂಡಳಿ. ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆ ಅಥವಾ ಆಸ್ಪತ್ರೆ, ಅವುಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸುವ ಆಡಳಿತ ಮಂಡಳಿಯಾಗಿದೆ. ಎನ್‌ಎಬಿಎಚ್ ಭಾರತದ ಸಂವಿಧಾನದ ಪ್ರಕಾರ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಡಿಯಲ್ಲಿ ಸಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಎನ್‌ಎಬಿಎಚ್ ದೇಶದ ಉನ್ನತ ಮಟ್ಟದಲ್ಲಿ ಆರೋಗ್ಯ ಮತ್ತು ಆರೋಗ್ಯ ಸೇವೆಗಳ ಮೇಲ್ವಿಚಾರಣೆ ಮಾಡುವ ಸಂಸ್ಥೆಯಾಗಿದೆ.
ಎನ್‌ಎಬಿಹೆಚ್ ಮಾನ್ಯತೆ ಪಡೆಯುವಲ್ಲಿ ವೈದ್ಯರು, ನರ್ಸಿಂಗ, ಪ್ಯಾರಾಮೆಡಿಕಲ್, ಕ್ಲರಿಕಲ್, ಸೇರಿದಂತೆ ಎಲ್ಲ ಸಿಬ್ಬಂದಿಗಳ ತಂಡವು ನಿರಂತರವಾಗಿ ಕಾರ್ಯನಿರತವಾಗಿತ್ತು. ಮಾನ್ಯತೆ ಪಡೆಯುವಲ್ಲಿ ಯಶಸ್ವಿಯಾಗಿರುವ ಆಸ್ಪತ್ರೆಯ ತಂಡವನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅಭಿನಂದಿಸಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 