ಡಾ.ಪ್ರಭಾಕರ ಕೋರೆಯವರಿಗೆ ಎಚ್. ಡಿ. ದೇವೇಗೌಡ ಪ್ರಶಸ್ತಿ
Dr. Prabhakar Kore to receive H. D. Deve Gowda Award
ಬೆಳಗಾವಿ 24: ಮಾಜಿ ಪ್ರಧಾನ ಮಂತ್ರಿ ರಾಜಕೀಯ ಮುತ್ಸದ್ದಿ ಹೆಚ್.ಡಿ.ದೇವೇಗೌಡರು ತಮ್ಮ ಬದುಕಿನ 93 ಸಾರ್ಥಕ ವರ್ಷಗಳನ್ನು ಪೂರೈಸಿ, ಅಭಿಮಾನಿಗಳಿಂದ "ಗಂಗ ಸಾಮ್ರಾಟ ಶ್ರೀಪುರುಷ" ಪ್ರಶಸ್ತಿಗೆ ಭಾಜನರಾದ ನಿಮಿತ್ತ ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 93 ಕೀರ್ತಿಸಂಪನ್ನರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಡಾ.ಬಾಬು ಜಗಜೀವನ್‌ರಾಮ್ ಭವನದಲ್ಲಿ ದಿ. 22ರಂದು ಜರುಗಿತು.
ಹೆಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯು ಡಾ.ಪ್ರಭಾಕರ ಕೋರೆಯವರಿಗೆ ‘ಹೆಚ್.ಡಿ.ದೇವೇಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಿದೆ.
ಶಿಕ್ಷಣ, ಕೃಷಿ, ಸಹಕಾರ, ರಾಜಕೀಯ, ಸಮುದಾಯದ ಕ್ಷೇಮಾಭಿವೃದ್ಧಿ ಕ್ಷೇತ್ರದಲ್ಲಿನ ‘ನ ಭೂತೋ ನ ಭವಿಷ್ಯತಿ' ಎಂಬ ಮಟ್ಟದಲ್ಲಿ ಅಗಾಧವಾದ ಸೇವೆಯನ್ನು ಸಲ್ಲಿಸುತ್ತಾ, ಕರ್ನಾಟಕ ರಾಜ್ಯ ಬಹುದೊಡ್ಡ ಆಸ್ತಿಯಾಗಿ ದೇಶ ವಿದೇಶಗಳಲ್ಲೂ ಜನಮನ್ನಣೆ ಗಳಿಸಿರುವ ಡಾ.ಪ್ರಭಾಕರ ಕೋರೆಯವರು ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಹೆಸರನ್ನು ಇಡೀ ವಿಶ್ವದಲ್ಲಿ ಪ್ರಸಿದ್ಧಿ ಪಡಿಸಿರುವುದು ಹೆಮ್ಮೆಯ ಸಂಗತಿ. ಈ ನಾಡಿಗೆ ದೇಶಕ್ಕೆ ಅಪಾರ ಕೀರ್ತಿ ತಂದಿರುವ ಸಾಧನೆಯ ಶಿಖರ ಡಾ.ಕೋರೆಯವರಿಗೆ ‘ಶ್ರೀ ಹೆಚ್.ಡಿ.ದೇವೇಗೌಡ ಪ್ರಶಸ್ತಿ'ಯನ್ನು ನೀಡಿ ಅಭಿನಂದಿಸಲಾಗಿದೆ. ಈ ಪ್ರಶಸ್ತಿಗೆ ಪುರಸ್ಕೃತ ಡಾ.ಪ್ರಭಾಕರ ಕೋರೆಯವರನ್ನು ಕೆಎಲ್‌ಇ ಆಡಳಿತ ಮಂಡಳಿ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 