ಶ್ರೀ ಖಾಸ್ಗತೇಶ್ವರ ಮಠಕ್ಕೆ ಡಾ.ಪ್ರಭುಗೌಡ ಲಿಂಗದಳ್ಳಿ ಭೇಟಿ
Dr. Prabhugowda Lingadalli visits Sri Khasgateshwara Mutt
ತಾಳಿಕೋಟಿ 30: ಪಟ್ಟಣದ ಐತಿಹಾಸಿಕ ಶ್ರೀ ಖಾಸ್ಗತೇಶ್ವರ ಮಠಕ್ಕೆ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ, ನಾಡಿನ ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ) ಭೇಟಿ ನೀಡಿದರು.
ಜೂನ್ 30 ರಿಂದ ಆರಂಭವಾದ ಶ್ರೀ ಖಾಸ್ಗತೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಾನುವಾರ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಲಿಂಗೈಕ್ಯ ಶ್ರೀ ಖಾಸ್ಗತೇಶ್ವರ ಹಾಗೂ ಶ್ರೀ ವಿರಕ್ತ ಶ್ರೀಗಳ ಕರ್ತೃ ಗದ್ದುಗೆಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಅವರು ಶ್ರೀ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರುನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದುಕೊಂಡು ಜಾತ್ರೋತ್ಸವದಂಗವಾಗಿ ಜುಲೈ 5ರಂದು ಪಟ್ಟಣದಲ್ಲಿ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಹಯೋಗದಲ್ಲಿ ನಡೆಯಲಿರುವ ಬೃಹತ್ ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಶಸ್ತ್ರಚಿಕಿತ್ಸೆ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಕುರಿತು ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಡಾ.ಪ್ರಭುಗೌಡ ಲಿಂಗದಳ್ಳಿ ಇವರನ್ನು ಶ್ರೀಮಠದ ವತಿಯಿಂದ ಪೂಜ್ಯ ಸಿದ್ದಲಿಂಗ ದೇವರು ಸನ್ಮಾನಿಸಿ ಆಶೀರ್ವಾದ ನೀಡಿದರು. ಡಾ.ಪ್ರಭುಗೌಡ ಲಿಂಗದಳ್ಳಿ ಅವರ ಸಮಾಜಮುಖಿ ಸೇವಾ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದಲಿಂಗ ಶ್ರೀಗಳು ಡಾ.ಪ್ರಭುಗೌಡರು ಕೇವಲ ವೈದ್ಯೆಕೀಯ ಕ್ಷೇತ್ರದಲ್ಲಿ ಮಾತ್ರವಲ್ಲ ಸಮಾಜದ ಹಲವಾರು ಕ್ಷೇತ್ರದಲ್ಲಿಯೂ ನಿಸ್ವಾರ್ಥ ಭಾವದಿಂದ ಸೇವೆ ಸಲ್ಲಿಸುತ್ತಿದ್ದಾರೆ ಶ್ರೀ ಮಠದ ಆಶೀರ್ವಾದ ಸದಾ ಅವರ ಮೇಲಿದೆ ಎಂದರು.
ಈ ವೇಳೆ ಮಲ್ಲನಗೌಡ ಬಿರಾದಾರ, ಶಿವನಗೌಡ ದೇಸಾಯಿ, ಪ್ರವೀಣ ರೆಡ್ಡಿ, ಮಹಾಂತೇಶ ಎಚ್.ನಬಿ ಕೊಂಡಗೂಳಿ ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 