ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಕ್ಷೇತ್ರದ ಪರವಾಗಿ ಡಾ. ಪ್ರಭುಗೌಡ ಸನ್ಮಾನ

ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಕ್ಷೇತ್ರದ ಪರವಾಗಿ ಡಾ. ಪ್ರಭುಗೌಡ ಸನ್ಮಾನ Dr. Prabhugowda felicitates the new KPCC President on behalf of the constituency

ದೇವರಹಿಪ್ಪರಗಿ 22 : ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಬಿ.ಕೆ.ಹರಿಪ್ರಸಾದ ಅವರಿಗೆ ದೇವರಹಿಪ್ಪರಗಿ ಕ್ಷೇತ್ರದ ಉಸ್ತುವಾರಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರು ಮತಕ್ಷೇತ್ರದ  ಜನತೆಯ ಪರವಾಗಿ ಸನ್ಮಾನಿಸಿ, ಗೌರವಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ದೇವರಹಿಪ್ಪರಗಿ ಹಾಗೂ ಹೂವಿನ ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆ ಭೇಟಿ ನೀಡಿ ಹೂ,ಗುಚ್ಚ ನೀಡಿ ಸೋಮವಾರ ಅಭಿನಂದಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ಸಂಕಲ್ಪವಾಗಿದೆ.  

ಅವರ ಸುದೀರ್ಘ ರಾಜಕೀಯ ಅನುಭವ ಹಾಗೂ ಸಂಘಟನಾ ಸಾಮರ್ಥ್ಯವು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಲಿದೆ, ಅವರ ನಾಯಕತ್ವದಲ್ಲಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮಹತ್ವದ ಜವಾಬ್ದಾರಿ ಅವರ ಮೇಲಿದೆ, ಅದೇ ರೀತಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುತ್ತಿದ್ದಾರೆ. ದೇವರಹಿಪ್ಪರಗಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಹಾಗೂ ಪಕ್ಷದಿಂದ ಸಹಕಾರ ಅಗತ್ಯ, ಮುಂಬರುವ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ.  

ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಸೇರಿದಂತೆ ಹಲವಾರು ವಿಚಾರಗಳನ್ನು ರಾಜ್ಯಾಧ್ಯಕ್ಷರ ಜೋತೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಸೀರ ಅಹ್ಮದ್ ಬೇಪಾರಿ, ಬಾಳಾಸಾಹೇಬಗೌಡ ಪಾಟೀಲ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ರಮೀಜಾ ನದಾಫ್, ಮುಖಂಡರುಗಳಾದ ಸಂಗಮೇಶ ಛಾಯಗೋಳ ಸೇರಿದಂತೆ ಹೂ.ಹಿ ಹಾಗೂ ದೇಹಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.