ಕೇಂದ್ರ ರಕ್ಷಣಾ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯರಾಗಿ ಡಾ. ಪ್ರತೀಕ್ ಮಾಳಿ ನಾಮನಿರ್ದೇಶನ

ಕೇಂದ್ರ ರಕ್ಷಣಾ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯರಾಗಿ ಡಾ. ಪ್ರತೀಕ್ ಮಾಳಿ ನಾಮನಿರ್ದೇಶನ  Dr. Prateek Mali nominated as a member of the Hindi Advisory Committee of the Union Ministry of Defe

ಕಾಗವಾಡ 14 : ಹಿಂದಿ ಭಾಷೆ, ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಾಗವಾಡ ತಾಲೂಕಿನ ಕುಂಬಾರಗುತ್ತಿ ಗ್ರಾಮದ ಯುವಕ ಡಾ. ಪ್ರತೀಕ್ ಮಾಳಿ ಅವರನ್ನು ಭಾರತ ಸರ್ಕಾರದ ಕೇಂದ್ರ ರಕ್ಷಣಾ ಸಚಿವಾಲಯದ ಹಿಂದಿ ಸಲಹಾ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. 

ಕೇಂದ್ರ ರಕ್ಷಣಾ ಸಚಿವರ ನಾಮನಿರ್ದೇಶನದ ಮೂಲಕ ಡಾ. ಪ್ರತೀಕ್ ಮಾಳಿ ಅವರಿಗೆ ಈ ಮಹತ್ವದ ಜವಾಬ್ದಾರಿ ದೊರೆತಿದ್ದು, ಕರ್ನಾಟಕದ ಶೈಕ್ಷಣಿಕ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ. 

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಸಂಜಯ್ ಸೇಠ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯ ಸಂಸದರು ಮತ್ತು ಉನ್ನತ ಶ್ರೇಣಿಯ ಅಧಿಕಾರಿಗಳು ಸೇರಿದಂತೆ ಒಟ್ಟು 18 ಸದಸ್ಯರನ್ನು ಒಳಗೊಂಡ ಸಮಿತಿಯಲ್ಲಿ ಡಾ. ಪ್ರತೀಕ್ ಮಾಳಿ ಅವರು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕದಿಂದ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಸೇರಿದಂತೆ ಇಬ್ಬರು ಸದಸ್ಯರು ಸಮಿತಿಗೆ ಆಯ್ಕೆಯಾಗಿದ್ದಾರೆ. ಡಾ. ಪ್ರತೀಕ್ ಮಾಳಿ ಅವರ ನಾಮನಿರ್ದೇಶನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ಸಂಶೋಧಕರು, ಸಾಹಿತ್ಯಾಸಕ್ತರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.