ಡಾ.ಎಸ್.ಬಿ. ಬಸೆಟ್ಟಿಯವರಿಗೆ “ಧೀಮಂತ ಸನ್ಮಾನ” ಪ್ರಶಸ್ತಿ ಪ್ರದಾನ
Dr. S.B. Bassetti presented with the “Dhimanta Sanmana” award
ಧಾರವಾಡ 05: ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಅಧ್ಯಯನ ವಿಭಾಗದ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಎಸ್.ಬಿ. ಬಸೆಟ್ಟಿಯವರ ಸಾಹಿತ್ಯ, ಸಮಾಜ ಸೇವೆ, ಸಂಘಟನೆ ಮತ್ತು ಶಿಕ್ಷಣ ವಿವಿಧ ಕ್ಷೇತ್ರದ ಸಾಧನೆ ಗುರುತಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನವ್ಹಂಬರ್ 01, 2025 ಶನಿವಾರ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ನೆನಪಿನಲ್ಲಿ ಆಯೋಜಿಸಿರುವ ‘ಧೀಮಂತ ಸನ್ಮಾನ’(ಶಿಕ್ಷಣ ಕ್ಷೇತ್ರ) ಪ್ರಶಸ್ತಿ ನೀಡಿ ಸನ್ಮಾಸಿದೆ.
ಹುಬ್ಬಳಿ ಶಹರದ ಶಾಸಕಾರಾದ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಹು-ಧಾ ಮಹಾನಗರ ಪಾಲಿಕೆ ಮಹಾಪೌರಾದ ಜ್ಯೋತಿ ವಿನಯ ಪಾಟೀಲ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ ಯಲಿಗಾರ, ಆಯುಕ್ತ ರುದ್ರೇಶ ಕಾಳಿ ಹಾಗೂ ಪ್ರಶಸ್ತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ. ಶ್ರೀಧರ ದಂಡಪ್ಪನವರ ಸೇರಿದಂತೆ ನಾಡಿನ ಹಿರಿಯ ಸಾಹಿತಿಗಳು, ಕಲಾವಿದರು ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪ್ರಸ್ತುತ ಇವರು ಕರ್ನಾಟಕ ವಿಶ್ವವಿದ್ಯಾಲಯದ ಗಾಂಧೀ ಅಧ್ಯಯನ ವಿಭಾಗದಲ್ಲಿ ಕಳೆದ 20 ವರ್ಷಗಳಿಂದ ಸಹಾಯಕ ಪ್ರಾಧ್ಯಾಪಕರಾಗಿ, ಸಂಶೋಧನೆ, ಸಮಾಜಸೇವೆ ಮತ್ತು ಕ್ಷೇತ್ರಕಾರ್ಯ, ಸಾಂಸ್ಕೃತಿಕ ಚಟುವಟಿಕೆ, ಸಂಘಟನೆ, ಶಿಕ್ಷಣ ಮತ್ತು ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರ ಸಂಕಿರಣ, ಸಮ್ಮೇಳನ, ಚರ್ಚೆ, ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ವಿವಿಧ ವಿಷಯಗಳ ಕುರಿತು ಶೈಕ್ಷಣಿಕವಾಗಿ ದಿನಪತ್ರಿಕೆ ಮತ್ತು ಮಾಸಪತ್ರಿಕೆ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ 20 ಪ್ರಶಸ್ತಿಗಳು ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿಯು ಇವರ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎ.ಎಂ.ಖಾನ, ಕುಲಸಚಿವರುಗಳು, ಸಿಂಡಿಕೇಟ್ ಸದಸ್ಯರು, ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕ/ಪ್ರಾಧ್ಯಾಪಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಸ್ನೇಹಿತರು ಶುಭ ಹಾರೈಸಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 