ವೈದ್ಯಕೀಯ ಸೇವೆಗೆ ಡಾ. ಶಫಿಉಲ್ಲಾ ಅವರಿಗೆ ’ವಿ.ಕೆ. ಹೆಲ್ತ್ ಎಕ್ಸಲೆನ್ಸ್ ಅಂಡ್ ಆನರ್’ ಪ್ರಶಸ್ತಿ
Dr. Shafiulla receives 'V.K. Health Excellence and Honour' award for medical service
ಕೊಪ್ಪಳ 26: ನಗರದ ಮಧುಮೇಹ ತಜ್ಞ ಡಾ. ಶಫಿಉಲ್ಲಾ ಹಾಗೂ ಅವರ ಸಿಟಿ ಶುಗರ್ ಕ್ಲಿನಿಕ್ಗೆ ಸಲ್ಲಿಸಿರುವ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಪರಿಗಣಿಸಿ, ’ವಿ.ಕೆ. ಹೆಲ್ತ್ ಎಕ್ಸಲೆನ್ಸ್ ಅಂಡ್ ಆನರ್ ಪ್ರದಾನ ಮಾಡಲಾಯಿತು.
ಬೆಂಗಳೂರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಜಂಟಿಯಾಗಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಧುಮೇಹ ಆರೈಕೆ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಡಾ. ಶಫಿಉಲ್ಲಾ ಅವರು ಸಲ್ಲಿಸಿರುವ ವಿಶಿಷ್ಟ ಸೇವೆ ಮತ್ತು ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ನಿಮಿಕಾ ರತ್ನಾಕರ್, ವಿ.ಕೆ. ಮಾಧ್ಯಮ ಬಳಗದ ಪ್ರಮುಖರು, ಕಾರ್ಯಕ್ರಮದ ಸಂಘಟಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಶಫಿಉಲ್ಲಾ ಅವರ ಪತ್ನಿ ಡಾ. ಶಗುಫ್ತಾ ಆಫ್ರೀನ್, ಕುಟುಂಬದ ಸದಸ್ಯರು, ಸಿಬ್ಬಂದಿ, ಅಭಿಮಾನಿಗಳು ಹಾಗೂ ಹಿತೈಷಿಗಳು ಉಪಸ್ಥಿತರಿದ್ದು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 