ಡಾ. ಶಿವಯೋಗಿ ಫಕ್ಕೀರಶೆಟ್ಟರ ಅವರಿಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ
Dr. Shivayogi Fakirshettar receives the Arogya Seva Ratna Award
ಧಾರವಾಡ 19: 25ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ವೈ. ಚಂದ್ರಶೇಖರ ಶಾಸ್ತ್ರಿ ಅವರ ಮಗಳಾದ ಅನ್ನಪೂರ್ಣಮ್ಮ ಸಿದ್ಧಲಿಂಗಶಾಸ್ತ್ರಿ ಹಿರೇಮಠ ದತ್ತಿ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘವು, 2004 ನೇ ಸಾಲಿನಿಂದ ಪ್ರತಿ ವರ್ಷ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮತ್ತು ಸೇವೆ ಮಾಡಿದ ವೈದ್ಯರಿಗೆ “ಆರೋಗ್ಯ ಸೇವಾ ರತ್ನ ಪ್ರಶಸ್ತಿ”ಯನ್ನು ನೀಡುತ್ತಾ ಬಂದಿದೆ. 2025ರ ‘ಆರೋಗ್ಯ ಸೇವಾ ರತ್ನ ಪ್ರಶಸ್ತಿ’ಯನ್ನು ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಇನಾಮಹೊಂಗಲದ
ಡಾ. ಶಿವಯೋಗಿ ಫಕ್ಕೀರಶೆಟ್ಟರ ಅವರಿಗೆ ನೀಡಲು ಸಂಘವು ನಿರ್ಧರಿಸಿದೆ. ಪ್ರಶಸ್ತಿಯನ್ನು ಇದೇ ತಿಂಗಳು 24ರಂದು ಸಾಯಂಕಾಲ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 