ಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಆಯ್ಕೆ
Dr. Sunil Jalalpure selected as the new Secretary of the KLE Society
ಬೆಳಗಾವಿ 07: ಕೆ.ಎಲ್.ಇ. ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರು ಹಾಗೂ ಕೆ.ಎಲ್.ಇ. ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾಗಿದ್ದ ಪ್ರೊ. (ಡಾ.) ಸುನೀಲ ಎಸ್. ಜಲಾಲಪುರೆ ಅವರನ್ನು ಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 1998ರಿಂದ ಕೆ.ಎಲ್.ಇ. ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಜಲಾಲಪುರೆ ಅವರು 2013ರಿಂದ ಸಂಸ್ಥೆಯ ಆಜೀವ ಸದಸ್ಯರಾಗಿದ್ದಾರೆ.
ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವ ಹೊಂದಿರುವ ಅವರು 2025ರ ಗ್ಲೋಬಲ್ ಸೈಂಟಿಸ್ಟ್ ಇಂಡೆಕ್ಸ್ನಲ್ಲಿ ವಿಶ್ವದ ಅಗ್ರ 5 ಪ್ರತಿಶತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವಿವಿಧ ರಾಷ್ಟ್ರೀಯ ಸಂಸ್ಥೆಗಳಿಂದ ?4 ಕೋಟಿಗೂ ಅಧಿಕ ಸಂಶೋಧನಾ ಅನುದಾನ ಪಡೆದಿರುವ ಅವರು, 195ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು, 8 ಪೇಟೆಂಟ್ಗಳು, 9 ಪಠ್ಯಪುಸ್ತಕಗಳು ಹಾಗೂ 4 ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ.
ಅವರು 60 ಸ್ನಾತಕೋತ್ತರ ಹಾಗೂ 30 ಪಿಎಚ್.ಡಿ. ಸಂಶೋಧಕರಿಗೆ ಮಾರ್ಗದರ್ಶನ ನೀಡಿದ್ದು, ವಿಶ್ವೇಶ್ವರಯ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ 20ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಡಾ. ಸುನೀಲ ಎಸ್. ಜಲಾಲಪುರೆ ಅವರ ನೇಮಕಕ್ಕೆ ಕೆ.ಎಲ್.ಇ. ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ಉಪಾಧ್ಯಕ್ಷ ಬಸವರಾಜ ತಟವಟಿ, ಕಾರ್ಯಾಧ್ಯಕ್ಷ ಅಮಿತ್ ಕೋರೆ, ಆಡಳಿತ ಮಂಡಳಿಯ ಸದಸ್ಯರು, ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಹಾಗೂ ಕುಲಪತಿ ಡಾ. ಸಂದೀಪ್ ಶ್ರೀವಾಸ್ತವ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 