ಧಾರವಾಡ ಕೃಷಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಡಾ. ಎನ್. ಬಿ. ಪ್ರಕಾಶ್ ನೇಮಕ
Dr. as the new chancellor of Dharwad Agricultural University. N. B. Appointed by Prakash
ಲೋಕದರ್ಶನ ವರದಿ
ಧಾರವಾಡ 10: ಧಾರವಾಡ ಕೃಷಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಬೆಂಗಳೂರಿನ ಜಿಕೆವಿಕೆ ಕೃಷಿ ಮಹಾವಿದ್ಯಾಲಯದ ಡೀನ್ ಹಾಗೂ ಖ್ಯಾತ ಮಣ್ಣು ವಿಜ್ಞಾನಿ ಡಾ. ಎನ್. ಬಿ. ಪ್ರಕಾಶ್ ಅವರನ್ನು ನೇಮಕ ಮಾಡಿ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಗೌರವಾನ್ವಿತ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ರಾಜ್ಯಪಾಲರ ಆದೇಶದಂತೆ ಡಾ. ಎನ್. ಬಿ. ಪ್ರಕಾಶ್ ಅವರ ಅಧಿಕಾರಾವಧಿ ನಾಲ್ಕು ವರ್ಷಗಳಾಗಿದ್ದು, ಅಥವಾ ಅವರು 65 ವರ್ಷ ವಯಸ್ಸು ತಲುಪುವವರೆಗೆ ಇರಲಿದೆ ಎಂದು ತಿಳಿಸಲಾಗಿದೆ.
ಡಾ. ಎನ್. ಬಿ. ಪ್ರಕಾಶ್ ಅವರು ಕೃಷಿ ಶಿಕ್ಷಣ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರದಲ್ಲಿ 30 ವರ್ಷಗಳಿಗೂ ಅಧಿಕ ಅನುಭವ ಹೊಂದಿದ್ದಾರೆ. ವಿಶೇಷವಾಗಿ ‘ಭಾರತೀಯ ಕೃಷಿಯಲ್ಲಿ ಸಿಲಿಕಾನ್ ಬಳಕೆಯ ಮಹತ್ವ’ ಕುರಿತು ಅವರು ನಡೆಸಿದ ಮಹತ್ವದ ಸಂಶೋಧನೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ಇವರ ನೂರಾರು ಸಂಶೋಧನಾ ಪ್ರಬಂಧಗಳು ಪ್ರತಿಷ್ಠಿತ ಅಂತರರಾಷ್ಟ್ರೀಯ ಜರ್ನಲ್ಗಳಲ್ಲಿ ಪ್ರಕಟಗೊಂಡಿವೆ. ಇತ್ತೀಚೆಗೆ ನವದೆಹಲಿಯ ಪ್ರತಿಷ್ಠಿತ ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿ ಫೆಲೋ ಆಗಿ ಅವರು ಗೌರವಿಸಲ್ಪಟ್ಟಿದ್ದಾರೆ. ಮಣ್ಣು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಅನನ್ಯ ಕೊಡುಗೆಗಾಗಿ ರಾಷ್ಟ್ರಮಟ್ಟದ ‘ಪ್ರೊ. ಸಂತ್ ಸಿಂಗ್ ಸ್ಮಾರಕ ಪ್ರಶಸ್ತಿ’ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿ ಹಾಗೂ ಪುರಸ್ಕಾರಗಳು ಡಾ. ಎನ್. ಬಿ. ಪ್ರಕಾಶ್ ಅವರ ಮುಡಿಗೇರಿವೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 