ಅರಮನೆ ಮೈದಾನದ ಬಳಿ ಈಶಾನ್ಯ ರಾಜ್ಯಗಳ ಜನರ ಜಮಾವಣೆ: ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಡಾ.ಕೆ.ಸುಧಾಕರ್
ಬೆಂಗಳೂರು, ಮೇ 23,ಈಶಾನ್ಯ ರಾಜ್ಯದ ನೂರಾರು ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಅರಮನೆ ಮೈದಾನದ ಬಳಿ ಜಮಾಯಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.ತಪ್ಪು ಮಾಹಿತಿಯಿಂದಾಗಿ ಮಣಿಪುರ, ಒಡಿಶಾ ರಾಜ್ಯಗಳ ಸಾವಿರಾರು ಮಂದಿ ಜಮಾಯಿಸಿದ್ದರಿಂದ ಈ ಗೊಂದಲ ಉಂಟಾಗಿತ್ತು. ಒಂದೂವರೆ ಸಾವಿರ ಮಂದಿಗೆ ಆಯಾ ರಾಜ್ಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಿಕೊಂಡು ಸೇವಾಸಿಂಧು ಆ್ಯಪ್ ಮೂಲಕ ಮೊಬೈಲ್ ಗಳಿಗೆ ಸಂದೇಶ ರವಾನಿಸಲಾಗಿತ್ತು. ಆ ಸಂದೇಶ ಅವರ ಮಧ್ಯೆಯೇ ಫಾರ್ವರ್ಡ್ ಆಗಿ ಇಂದು ಪ್ರಯಾಣಕ್ಕೆ ಆಯ್ಕೆ ಆಗದಿದ್ದವರೂ ನೂರಾರು ಸಂಖ್ಯೆಯಲ್ಲಿ ಆಗಮಿಸಿ ಭಾರಿ ದಟ್ಟಣೆ ಉಂಟಾಗಿತ್ತು.
ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟ್ಟಿದ್ದ ಸಚಿವರು ಭಾರಿ ದಟ್ಟಣೆ ಗಮನಿಸಿ ಸ್ಥಳಕ್ಕೆ ಧಾವಿಸಿ ಗೊಂದಲಕ್ಕೆ ಕಾರಣಗಳನ್ನು ಅಧಿಕಾರಿಗಳಿಂದ ಪಡೆದರು.ತಕ್ಷಣವೇ ಮೊಬೈಲ್ ಮೂಲಕ ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಗೊಂದಲ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆದೇಶ ನೀಡಿದರು.ಈ ಸಂದರ್ಭದಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದ ಇರ್ಷಾದ್ ಎಂಬಾತ ಕುಸಿದು ಬಿದ್ದಾಗ ಆತನ ಬಳಿ ಧಾವಿಸಿದ, ಸ್ವತಃ ವೈದ್ಯರೂ ಆಗಿರುವ ಸಚಿವ ಸಧಾಕರ್ ಅವರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.ನಂತರ ಈಶಾನ್ಯ ರಾಜ್ಯಗಳ ಜನರುದ್ದೇಶಿಸಿ ಮಾತನಾಡಿ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಸರ್ಕಾರದ ವೆಚ್ಚದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಮುಖ್ಯಮಂತ್ರಿ ಅವರು ಅದಕ್ಕೆ ಬೇಕಾದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀವು ನಿಮ್ಮ ಊರಿಗೆ ಹೋಗಲು ಹೆಚ್ಚುವರಿ ಬೋಗಿಗಳನ್ನು ಒದಗಿಸಲು ರೈಲ್ವೆ ಸಚಿವರಿಗೂ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 