ಡಾ. ಬಾಬು ಜಗಜೀವನರಾಂ ಪುಣ್ಯತಿಥಿ


ಗದಗ 06: ಹಸಿರು ಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನಿಗಳಾದ ದಿ. ಡಾ. ಬಾಬು ಜಗಜೀವನರಾಮ ಅವರು ದೇಶಕ್ಕಾಗಿ ಸುಮಾರು 5 ದಶಕಗಳ ಶಿಕ್ಷಣ, ಸಾಮಾಜಿಕ, ಕೃಷಿ, ಆಥರ್ಿಕ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಸುದೀರ್ಘ ಕೊಡುಗೆ ನೀಡಿದ ಶ್ರೇಷ್ಠ ವ್ಯಕ್ತಿತ್ವ ಅವರದಾಗಿತ್ತು ಎಂದು ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ರವಿ ಗುಂಜೀಕರ ಹೇಳಿದರು.

ಇಲ್ಲಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೇಲಮಹಡಿಯಲ್ಲಿರುವ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಶುಕ್ರವಾರ ಏರ್ಪಡಿಸಿದ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ 32ನೇ ಪುಣ್ಯಸ್ಮರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. 

ಮಹಾತ್ಮಗಾಂಧೀಜಿ ನೇತ್ರತ್ವದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಪ್ರಮುಖವಾದ ಪಾತ್ರ ಬೀರಿ ದೇಶಪ್ರೇಮ ಮೆರದ ಶ್ರೇಷ್ಠ ವ್ಯಕ್ತಿತ್ವ ಅವರದಾಗಿದೆ. ಭಾರತ ಸಂವಿಧಾನ ಪರಿಷತ್ ಸದಸ್ಯರಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಆಂಬೇಡ್ಕರ ಅವರಿಗೆ ಸಹಕಾರ ನೀಡಿದ್ದಾರೆ. ಶೋಷಿತರ ಧ್ವನಿಯಾಗಿ ಸಂಸತ್ತಿನಲ್ಲಿ ಜನಪರ ಕಾರ್ಯ ಮಾಡಿದ್ದಾರೆ. 50 ವರ್ಷದ ರಾಜಕೀಯ ಕ್ಷೇತ್ರದಲ್ಲಿ ಸೃಜನಾತ್ಮಕ ಕಾರ್ಯಗಳನ್ನು ಮಾಡಿ ದೇಶವನ್ನು ವಿಶ್ವಮಟ್ಟದಲ್ಲಿ ಗುರುತಿಸಿದವರಾಗಿದ್ದಾರೆ ಎಂದು ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು. ಎಸ್.ಎಸ್.ಪಾಟೀಲ್, ಬಸವರಾಜ ಇಟಗಿ, ಕುಮಾರ ದಹಿಂಡೆ ಸೇರಿದಂತೆ ಸಿಬ್ಬಂದಿ ವರ್ಗ ಹಾಜರಿದ್ದರು.