ಕರಡು ಮತದಾರರ ಪಟ್ಟಿ ಪ್ರಕಟ: ೧೧.೨೩ ಲಕ್ಷ ಮತದಾರರು
Draft electoral roll published: 11.23 lakh voters
ಲೋಕದರ್ಶನ ವರದಿ
ಕಾರವಾರ ೨೪ : ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ–೨೦೨೬ (SIಖ) ಸಂಬAಧ ಉತ್ತರ ಕನ್ನಡ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ೫,೬೨,೦೦೪ ಪುರುಷರು, ೫,೬೧,೦೧೪ ಮಹಿಳೆಯರು ಹಾಗೂ ೪ ತೃತೀಯ ಲಿಂಗದ ಮತದಾರರು ಸೇರಿದಂತೆ ಒಟ್ಟು ೧೧,೨೩,೦೨೨ ಮತದಾರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷಿö್ಮÃಪ್ರಿಯಾ ತಿಳಿಸಿದ್ದಾರೆ.
ಕ್ಷೇತ್ರವಾರು ಹಳಿಯಾಳದಲ್ಲಿ ೧,೬೭,೭೬೭, ಕಾರವಾರದಲ್ಲಿ ೧,೯೮,೯೬೨, ಕುಮಟಾದಲ್ಲಿ ೧,೭೭,೪೩೪, ಭಟ್ಕಳದಲ್ಲಿ ೨,೧೩,೬೮೨, ಶಿರಸಿಯಲ್ಲಿ ೧,೯೧,೭೫೧ ಹಾಗೂ ಯಲ್ಲಾಪುರದಲ್ಲಿ ೧,೭೩,೪೨೬ ಮತದಾರರಿದ್ದಾರೆ. ಮತಗಟ್ಟೆಗಳ ಪುನರ್ವಿಂಗಡಣೆ ಬಳಿಕ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ೧,೫೨೩ ಮತಗಟ್ಟೆಗಳಿದ್ದು, ೭೮ ಮತಗಟ್ಟೆಗಳು ಹೆಚ್ಚಾಗಿವೆ.
ಕರಡು ಪಟ್ಟಿಗೆ ಸಂಬAಧಿಸಿದAತೆ ಆ.೨೪ರಿಂದ ಸೆ.೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಸ್ವೀಕೃತ ಹಕ್ಕು-ಆಕ್ಷೇಪಣೆಗಳ ವಿಲೇವಾರಿ ಆ.೨೪ರಿಂದ ಅ.೨೨ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅ.೨೭ರಂದು ಪ್ರಕಟಿಸಲಾಗುವುದು.
ಮತದಾರರ ಪಟ್ಟಿಯಲ್ಲಿ ಹೆಸರು, ವಿವರ ಅಥವಾ ಪಟ್ಟಿಗೆ ಸಂಬAಧಿಸಿದ ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯಲ್ಲಿ ಸಲ್ಲಿಸಬಹುದು. ಅ.೧, ೨೦೨೬ಕ್ಕೆ ೧೮ ವರ್ಷ ಪೂರ್ಣಗೊಳಿಸುವ ಅರ್ಹ ನಾಗರಿಕರು ನಮೂನೆ-೬ರ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ಇತರ ತಿದ್ದುಪಡಿಗಳಿಗೆ ಸಂಬAಧಿಸಿದ ನಮೂನೆಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮತದಾರರ ಪಟ್ಟಿಗೆ ಸಂಬAಧಿಸಿದ ಹೆಚ್ಚಿನ ಮಾಹಿತಿಯನ್ನು ಚುನಾವಣಾ ಆಯೋಗದ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕೃತ ವೆಬ್ಸೈಟ್ಗಳಲ್ಲಿ ಪಡೆಯಬಹುದು. ಸಾರ್ವಜನಿಕರು ಹೆಚ್ಚಿನ ಮಾಹಿತಿ ಅಥವಾ ಸಲಹೆಗಳಿಗಾಗಿ ಮತದಾರರ ಸಹಾಯವಾಣಿ ೧೯೫೦ಕ್ಕೆ ಸಂಪರ್ಕಿಸಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 