ಕರಡು ಮತದಾರರ ಪಟ್ಟಿ ಪ್ರಕಟ: ಸೆ.೨೩ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
Draft electoral roll published: Opportunity to submit objections until September 23.
ಲೋಕದರ್ಶನ ವರದಿ
ಬಳ್ಳಾರಿ ೨೪: ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆ.೨೪ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಕೇಶವನ್ ವಿಡಿಯೋ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊAದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನಿಯಮಾನುಸಾರ ಭಾಗವಹಿಸಲು ಜಿಲ್ಲಾಡಳಿತ ಮುಕ್ತ ಅವಕಾಶ ಕಲ್ಪಿಸಿದೆ. ರಾಜಕೀಯ ಪಕ್ಷಗಳ ಮುಖಂಡರು, ಏಜೆಂಟರು ಹಾಗೂ ಕಾರ್ಯಕರ್ತರು ಮತದಾರರಲ್ಲಿ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹರು ಪಟ್ಟಿಗೆ ಸೇರ್ಪಡೆಯಾಗಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಚುನಾವಣಾ ವಿಭಾಗದ ಪ್ರಕ್ರಿಯೆಗಳು ಪಾರದರ್ಶಕವಾಗಿ ನಡೆಯುತ್ತಿದ್ದು, ಸ್ವೀಕರಿಸಲಾಗುವ ಪ್ರತಿಯೊಂದು ಆಕ್ಷೇಪಣೆ ಹಾಗೂ ಮನವಿಯನ್ನು ನಿಗದಿತ ಕಾನೂನು ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮತದಾರರ ಪಟ್ಟಿಗೆ ಸಂಬAಧಿಸಿದ ಆಕ್ಷೇಪಣೆ ಅಥವಾ ತಿದ್ದುಪಡಿ ಇದ್ದಲ್ಲಿ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಜಿಲ್ಲೆಯಲ್ಲಿ ೧೨,೨೯,೫೮೬ ಮತದಾರರು ಇದ್ದರು. ಪ್ರಸ್ತುತ ಕರಡು ಪಟ್ಟಿಯ ಪ್ರಕಾರ ಒಟ್ಟು ೧೦,೦೬,೩೦೭ ಮತದಾರರು ಇದ್ದು, ಶೇ.೮೧.೮೪ರಷ್ಟು ಮತದಾರರು ನೇರವಾಗಿ ಎಸ್ಐಆರ್ ಪ್ರಕ್ರಿಯೆಯ ಪರಿಶೀಲನೆಗೆ ಒಳಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ಹಿಂದೆ ೧,೨೨೭ ಮತಗಟ್ಟೆಗಳು ಇದ್ದು, ೧,೨೦೦ಕ್ಕಿಂತ ಹೆಚ್ಚು ಮತದಾರರಿರುವ ಕಡೆಗಳಲ್ಲಿ ೩೩ ಹೆಚ್ಚುವರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ಒಟ್ಟು ಮತಗಟ್ಟೆಗಳ ಸಂಖ್ಯೆ ೧,೨೬೦ಕ್ಕೆ ಏರಿಕೆಯಾಗಿದೆ ಎಂದರು.
೩೭,೮೭೨ ಮತದಾರರಿಗೆ ನೋಟಿಸ್
ಮತದಾರರ ಪಟ್ಟಿ ಮ್ಯಾಪಿಂಗ್ ಆಗದ ೧೧,೯೧೪ ಹಾಗೂ ದೋಷಪೂರಿತ ೨೫,೯೫೮ ಪ್ರಕರಣಗಳು ಸೇರಿದಂತೆ ಒಟ್ಟು ೩೭,೮೭೨ ಮತದಾರರಿಗೆ ನೋಟಿಸ್ ಜಾರಿ ಮಾಡಲಾಗುತ್ತಿದೆ. ನೋಟಿಸ್ ಸ್ವೀಕರಿಸಿದ ಮತದಾರರು ತಮ್ಮ ದಾಖಲೆಗಳನ್ನು ಹಾಜರುಪಡಿಸಲು ಕನಿಷ್ಠ ಏಳು ದಿನಗಳ ಕಾಲಾವಕಾಶ ನೀಡಲಾಗುತ್ತದೆ.
ಮುಂದಿನ ತಿಂಗಳ ೧ರಿಂದ ಮತದಾರರ ವಿಚಾರಣೆ ಪ್ರಕ್ರಿಯೆ ಆರಂಭವಾಗಲಿದ್ದು, ಇದಕ್ಕಾಗಿ ೬೯ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರು ತಮ್ಮ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಜೊತೆಗೆ ಚುನಾವಣಾ ಆಯೋಗ ಸೂಚಿಸಿರುವ ಪಟ್ಟಿಯಲ್ಲಿನ ಯಾವುದೇ ಎರಡು ಪೂರಕ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಕರಡು ಪಟ್ಟಿಗೆ ಸಂಬAಧಿಸಿದAತೆ ಸಾರ್ವಜನಿಕರು ಅಥವಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಒಂದು ತಿಂಗಳೊಳಗೆ ಆಕ್ಷೇಪಣೆ ಸಲ್ಲಿಸಬಹುದು. ಹೆಸರು ಕೈಬಿಟ್ಟಿರುವುದು ಅಥವಾ ತಪ್ಪಾಗಿ ನಮೂದಾಗಿರುವ ಕುರಿತು ಸಹಾಯಕ ನೋಂದಣಾಧಿಕಾರಿಗಳು ಸ್ಪಷ್ಟ ಕಾರಣಗಳನ್ನು ಒಳಗೊಂಡ ಆದೇಶ ಹೊರಡಿಸಲಿದ್ದಾರೆ ಎಂದರು.
ಅಧಿಕಾರಿಗಳ ಆದೇಶದಿಂದ ತೃಪ್ತರಾಗದಿದ್ದಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ಎರಡನೇ ಮೇಲ್ಮನವಿಯನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲು ಅವಕಾಶವಿದೆ.
ಸೆ.೨೩ರವರೆಗೆ ಆಕ್ಷೇಪಣೆ ಸಲ್ಲಿಕೆ
ಸೆಪ್ಟೆಂಬರ್ ೨೩ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ. ಸೆಪ್ಟೆಂಬರ್ ೨೪ರಿಂದ ಯಾವುದೇ ಹೊಸ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ನೋಟಿಸ್ ಜಾರಿಯಾದ ಬಳಿಕ ಕನಿಷ್ಠ ಏಳು ದಿನಗಳ ಕಾಲಾವಕಾಶ ನೀಡಿದ ನಂತರ ಆಕ್ಷೇಪಣೆಗಳ ಪರಿಶೀಲನೆ ಆರಂಭವಾಗಲಿದ್ದು, ಅಕ್ಟೋಬರ್ ೨೨ರವರೆಗೆ ವಿಲೇವಾರಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಅ.೨೭ರಂದು ಅಂತಿಮ ಮತದಾರರ ಪಟ್ಟಿ
ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಅಕ್ಟೋಬರ್ ೨೭ರಂದು ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು. ಕರಡು ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವ ಅಥವಾ ತಿದ್ದುಪಡಿ ಅಗತ್ಯವಿರುವ ಮತದಾರರು ನಮೂನೆ-೬ ಸಲ್ಲಿಸುವ ಮೂಲಕ ತಮ್ಮ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅರ್ಜಿ ಸಲ್ಲಿಸಬೇಕು.
ನಮೂನೆ-೬ರೊಂದಿಗೆ ಆಧಾರ್ ಕಾರ್ಡ್ ಹಾಗೂ ಅಗತ್ಯವಿರುವ ಇತರೆ ಎರಡು ದಾಖಲೆಗಳನ್ನು ಸಲ್ಲಿಸಬೇಕು. ಕರಡು ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದ್ದು, ಸಾರ್ವಜನಿಕರು ನಿಗದಿತ ಅವಧಿಯೊಳಗೆ ಆಕ್ಷೇಪಣೆ ಹಾಗೂ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದAತೆ ಹಾಗೂ ಅನರ್ಹ ಅಥವಾ ನಕಲಿ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ಚುನಾವಣಾ ವಿಭಾಗ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಜುಬೇರ್ ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ರೇಣುಕಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 