ಕರಡು ಮತದಾರರ ಪಟ್ಟಿ ಪ್ರಕಟ: ಹೆಸರು ಪರಿಶೀಲಿಸಲು ಅವಕಾಶ

ಕರಡು ಮತದಾರರ ಪಟ್ಟಿ ಪ್ರಕಟ: ಹೆಸರು ಪರಿಶೀಲಿಸಲು ಅವಕಾಶ Draft electoral roll published: Opportunity to verify names

ಲೋಕದರ್ಶನ ವರದಿ

ಹಾವೇರಿ, ಆ.೨೪: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. 

ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕರಡು ಪಟ್ಟಿ ಲಭ್ಯವಿದ್ದು, ಸಾರ್ವಜನಿಕರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಬಹುದು. ಜಿಲ್ಲೆಯ ಅಧಿಕೃತ ವೆಬ್‌ಸೈಟ್ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲೂ ಪಟ್ಟಿ ಪ್ರಕಟಿಸಲಾಗಿದೆ. 

ಅರ್ಹ ಮತದಾರರು ಹೆಸರು ಸೇರ್ಪಡೆಗೆ ನಮೂನೆ-೬, ಹೆಸರು ತೆಗೆದುಹಾಕಲು ನಮೂನೆ-೭ ಹಾಗೂ ತಿದ್ದುಪಡಿ ಅಥವಾ ವರ್ಗಾವಣೆಗೆ ನಮೂನೆ-೮ರಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. 

ಆಕ್ಷೇಪಣೆ ಹಾಗೂ ಹಕ್ಕುಗಳನ್ನು ಸಲ್ಲಿಸಲು ಆ.೨೪ರಿಂದ ಸೆ.೨೩ರವರೆಗೆ ಅವಕಾಶವಿದ್ದು, ಆಕ್ಷೇಪಣೆಗಳ ಕುರಿತು ನೋಟಿಸ್ ಹಾಗೂ ವಿಲೇವಾರಿ ಪ್ರಕ್ರಿಯೆ ಸೆ.೨೪ರಿಂದ ಅ.೨೨ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿ ಅ.೨೭, ೨೦೨೬ರಂದು ಪ್ರಕಟವಾಗಲಿದೆ. 

ಜೂನ್ ೧೬, ೨೦೨೬ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು ೧೩,೩೫,೩೪೨ ಮತದಾರರು ಇದ್ದು, ಈ ಪೈಕಿ ೧೨,೨೦,೨೮೧ ಮಂದಿ ನೋಂದಾಯಿತ ಮತದಾರರಾಗಿದ್ದಾರೆ. ಜಿಲ್ಲೆಯಲ್ಲಿ ೧೪,೨೪೭ ಓo ಒಚಿಠಿಠಿiಟಿg ಹಾಗೂ ೪೫,೭೬೧ ಂಟಿomಚಿಟies ಮತದಾರರಿಗೆ ನೋಟಿಸ್ ನೀಡಲಾಗುತ್ತಿದ್ದು, ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.