ಕೃಷಿ ವಿವಿ ನೇಮಕಾತಿಗೆ ಏಕರೂಪ ನಿಯಮ ರಚನೆಯ ಕರಡು ಅಂತಿಮ: ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ
ಬೆಂಗಳೂರು, ಮಾ .19 ರಾಜ್ಯದಲ್ಲಿರುವ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ, ಹಣಕಾಸಿನ ಸೌಕರ್ಯ ಮತ್ತು ಸೇವಾ ನಿಯಮಕ್ಕೆ ಏಕರೂಪ ಕಾಯಿದೆ ನಿಯಮಕ್ಕೆ ಸಂಬಂಧಿಸಿದ ಏಕರೂಪ ಪರಿನಿಯಮ ರಚನೆಯ ಕುರಿತು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಿ ಕರಡನ್ನು ಅಂತಿಮಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಎಂ.ಸಿ.ವೇಣುಗೋಪಾಲ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಗಳ ಅನುಮೋದನೆ ಪಡೆಯಲಾಗಿದೆ. ಕರಡು ಏಕರೂಪ ಪರಿನಿಯಮಕ್ಕೆ ಆರ್ಥಿಕ ಇಲಾಖೆ, ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಸೇವಾ ನಿಯಮಗಳು) ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಗಳ ಅಭಿಪ್ರಾಯವನ್ನು ಕೋರಲಾಗಿದ್ದು, ಈ ಇಲಾಖೆಗಳು ಅಭಿಪ್ರಾಯಗಳು ನೀಡಿದ ಬಳಿಕ ರಾಜ್ಯಪಾಲರ ಅನುಮೋದನೆ ಪಡೆದು ಶೀಘ್ರವಾಗಿ ಏಕರೂಪ ಕಾಯಿದೆಯನ್ನು ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಏಕರೂಪ ಪರಿನಿಯಮ ರಚನೆಯ ಪ್ರಕ್ರಿಯೆಯು ಹಲವು ಇಲಾಖೆಗಳೊಂದಿಗೆ ಸಮಾಲೋಚಿಸುವ ಹಾಗೂ ಹಲವು ಹಂತರ ಚರ್ಚೆಗಳನ್ನೊಳಗೊಂಡಿರುವುದರಿಂದ ಇದಕ್ಕೆ ಹೆಚ್ಚಿನ ಸಮಯದ ಅಗತ್ಯವಿರುತ್ತದೆ ಎಂದು ಸಚಿವರು ಹೇಳಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 