ಲೋಕದರ್ಶನ ವರದಿ
ವಿಜಯಪುರ 10:ಭೀಕರ ಬರ ಇರುವ ಹಿನ್ನಲೆಯಲ್ಲಿ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳಾದ ಮೊಹ್ಮದ ಮೊಹಸೀನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲಿಸಿ ಸಚಿವ ಸಂಪುಟ ಉಪ ಸಮಿತಿ ಸೂಚಿಸಿರುವಂತೆ ಜಿಲ್ಲೆಯಲ್ಲಿ ಲಭ್ಯವಿರುವ ಕೊಳವೆ ಬಾವಿಗಳ ಜಲಸಂಪನ್ಮೂಲ ಆಧಾರದ ಮೇಲೆ ಕೊಳವೆ ಬಾವಿಗಳ ಫ್ಲಸಿಂಗ್, ಹೈಡ್ರೋಫ್ಯಾಕ್ಚರಿಂಗ್ ಹಾಗೂ ಡಿಪನಿಂಗ್ ಮಾಡುವ ಕುರಿತು ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಜಿಲ್ಲೆಯಲ್ಲಿರುವ ಸಕರ್ಾರಿ ಕೊಳವೆ ಬಾವಿಗಳು ಹಾಗೂ ಜಲಸಂಪನ್ಮೂಲ ಲಭ್ಯವಿರುವ ಬಗ್ಗೆ ಮತ್ತು ಕೊಳವೆ ಬಾವಿಗಳ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಕ್ರೀಯಾಯೋಜನೆಯನ್ವಯ ಅವಶ್ಯಕ ಕ್ರಮ ಕೈಗೊಳ್ಳಬೇಕು. ಜನವಸತಿಗಳಿಗೆ ಅವಶ್ಯಕತೆಯನುಸಾರ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಖಾಸಗಿ ಕೊಳವೆ ಬಾವಿಗಳ ಮಾಲೀಕರ ಜಲಸಂಪನ್ಮೂಲ ಹೆಚ್ಚಿರುವ ಬಗ್ಗೆ ಗುರುತಿಸಿ ಆ ನೀರು ಪಡೆಯುವ ಕುರಿತಂತೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ 90 ದಿನಗಳ ನಂತರವೂ ಸಹ ಕುಡಿಯುವ ನೀರು ಸರಬರಾಜುವಿಗೆ ಉಪ ಸಮಿತಿ ಸೂಚಿಸಿದೆ. ಈ ದಿಸೆಯಲ್ಲಿ ಜನರಿಗೆ ನೀರು ಪೂರೈಸುವ ಜೊತೆಗೆ ಗೋಶಾಲೆಗಳಲ್ಲಿರುವ ಜಾನುವಾರುಗಳಿಗೂ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಜನವಸತಿ ಇರುವ ಪ್ರದೇಶಗಳ ಹಾಗೂ ಸಮೀಪದ ಜಮೀನುಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಸಾಧ್ಯವಿದ್ದಲ್ಲಿ ಕ್ರಮ ಕೈಗೊಳ್ಳಬೇಕು. ತಾಲೂಕಾ ಟಾಸ್ಕ್ಫೋಸರ್್ಗಳ ಮೂಲಕ ನಿರಂತರ ಸಭೆ ನಡೆಸಿ ಬರ ಪರಿಹಾರ ಕಾಮಗಾರಿ ಚುರುಕುಗೊಳಿಸಬೇಕು. ವಿಶೇಷವಾಗಿ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಅಭಿಯಂತರರು, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಜಾಗೃತರಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಜನರಿಗೆ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಪ್ರಗತಿಯನ್ನು ತೀವ್ರಗೊಳಿಸಬೇಕು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಗಂಭೀರವಾದ ಪರಿಸ್ಥಿತಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಬಡ ಜನರಿಗೆ ಹೆಚ್ಚೆಚ್ಚು ಉದ್ಯೋಗಾವಕಾಶ ಕಲ್ಪಿಸಬೇಕು. ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ, ಹೆಚ್ಚು ಪ್ರಗತಿ ಸಾಧಿಸಬೇಕು. ಜಿಲ್ಲಾ ಮಟ್ಟದಿಂದ ತಾಲೂಕಾ ಮಟ್ಟದ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಗೋಶಾಲೆಗಳಿಗೆ ಮೇವಿನ ಕೊರತೆಯಾಗದಂತೆ ಗಮನ ನೀಡಬೇಕು. ಸಕರ್ಾರೇತರ ಸಂಘ-ಸಂಸ್ಥೆಗಳು ನಡೆಸುತ್ತಿರುವ ಗೋಶಾಲೆಗಳಿಗೂ ಸಹ ಮೇವು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವಂತೆ ತಿಳಿಸಿದ ಅವರು, ಈ ಕಾರ್ಯ ನಾಳೆಯಿಂದಲೇ ಆರಂಭಿಸಬೇಕು. ಪ್ರತಿ ವಸತಿಗಳಿಗೆ ಜನಸಂಖ್ಯೆಯಾಧಾರ, ಜಾನುವಾರುಗಳ ಸಂಖ್ಯೆ ಹಾಗೂ ಪ್ರತಿದಿನದ ನೀರಿನ ಅವಶ್ಯಕತೆಗನುಗುಣವಾಗಿ ನೀರು ಪೂರೈಸುವಂತೆ ತಿಳಿಸಿದರು.
ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳು, ರೇಷ್ಮೆ ಉಪನಿದರ್ೇಶಕರು, ತಮ್ಮ ಕರ್ತವ್ಯದಲ್ಲಿ ಗಂಭೀರತೆಯನ್ನು ತೋರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಸಹ ಜಾರಿಗೊಳಿಸಬೇಕು. ಕೃಷಿ ವಿವಿಧ ಗ್ರಾಮೀಣ ವಸತಿ ಯೋಜನೆಯಡಿ ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ತಾಲೂಕಾವಾರು ಈ ಕುರಿತು ಪರಿಶೀಲನೆ ನಡೆಸಬೇಕು. ಗ್ರಾಮ ಪಂಚಾಯತ್ವಾರು ಕ್ರೀಯಾಯೋಜನೆಯನ್ವಯ ಅರ್ಹ ಫಲಾನುಭವಿಗಳಿಗೆ ವಿವಿಧ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಬೇಕು. ಒಟ್ಟಾರೆ ತೀವ್ರ ಬರ ಇರುವ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ, ಜಾನುವಾರುಗಳಿಗೆ ಮೇವಿನ ಸೌಲಭ್ಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಮುಂದಿನ ಮಾಹೆಯಿಂದ ಜನ ಸಂಪರ್ಕ ಸಭೆ ನಡೆಸುವ ಸಂದರ್ಭದಲ್ಲಿ ಯಾವುದೇ ರೀತಿಯ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾರಣ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಗತಿ ಸಾಧಿಸುವ ಜೊತೆಗೆ ತಮ್ಮ ಅಧೀನದ ಅಧಿಕಾರಿಗಳನ್ನು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಬೇಕು. ಯಾವುದೇ ರೀತಿಯ ಲೋಪ ಕಂಡು ಬಂದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೂ ತಿಳಿಸುವಂತೆ ಈ ಸಂದರ್ಭದಲ್ಲಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ಇತ್ತೀಚೆಗೆ ಕಂದಾಯ ಸಚಿವರ ನೇತೃತ್ವದ ಸಚಿವ ಸಂಪುಟದ ಉಪ ಸಮಿತಿ ಬರ ಪರಿಹಾರ ಕಾಮಗಾರಿ ಪರಿಶೀಲಿಸಿದೆ. ಉಪ ಸಮಿತಿ ಸೂಚನೆಯನ್ವಯ ಕೊಳವೆ ಬಾವಿಗಳ ಪುನಶ್ಚೇತನಕ್ಕೆ ಕ್ರೀಯಾ ಯೋಜನೆ ರೂಪಿಸಲು, ನರೇಗಾ, ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಸಾಧಿಸಲಾಗುತ್ತಿರುವ ಪ್ರಗತಿ ಬಗ್ಗೆ ನಿರಂತರ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.