ಡ್ರೀಮ ಸ್ಕೂಲ ಸಂಸ್ಥೆ ಶಾಲಾ ಮಕ್ಕಳ ಶೈಕ್ಷಣಿಕ ಹಿತಕ್ಕೆ ಪ್ರಾಮಾಣಿಕ ಪ್ರಯತ್ನ
Dream School is a sincere effort for the educational welfare of school children
ಹಾವೇರಿ 31: ಶೈಕ್ಷಣಿಕ ಸ್ಪರ್ದೆಯ ಭರಾಟೆಯಲ್ಲಿ ಅತ್ಯುತ್ತಮ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯವಿದ್ದು ಭವಿಷ್ಯದ ಬದುಕಿಗೆ ಇಂದೇ ಸಿದ್ದಗೊಳ್ಳಬೇಕು ಎಂದು ಹಾವೇರಿ ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಎಮ್.ಬಿ ಮಹದೇವಪ್ಪ ತಿಳಿಸಿದರು.
ರವಿವಾರ ಪಟ್ಟಣದ ಭಗತ್ ಪಿ.ಯು ಕಾಲೇಜು ಸಭಾಂಗಣದಲ್ಲಿ ಬೆಂಗಳೂರಿನ ಡ್ರೀಮ ಸ್ಕೂಲ ಪೌಂಡೇಶನ ಸಂಸ್ಥೆ ಜಿಲ್ಲೆಯ ವಿವಿಧ ಶಾಲೆಗಳ ಪ್ರತಿಭಾವಂತ 53 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸರ್ಕಾರ ಹಲವು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ ಇದರ ನಡುವೆ ಡ್ರೀಮ ಸ್ಕೂಲ ಪೌಂಡೇಶನ ಹಾವೇರಿ ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳಿಗೆ ವರ್ಷವೀಡಿ ಶೈಕ್ಷಣಿಕ ಮಾರ್ಗದರ್ಶನ ನೀಡಿ ಮಕ್ಕಳ ಶೈಕ್ಷಣಿಕ ಹಿತಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ.
ಇಂದಿನ ಸ್ಪರ್ದೆಗೆ ಮಕ್ಕಳನ್ನು ಸಿದ್ದಗೊಳಿಸುವ ಅನಿವಾರ್ಯತೆ ನಮ್ಮ ಮುಂದಿದೆ ಎಂದರು.
ಸಾಹಿತಿ ಪ್ರೊ.ಮಾರುತಿ ಶಿಡ್ಲಾಪೂರ ಮುಖ್ಯ ಅತಿಥಿಯಾಗಿ ಮಾತನಾಡಿ, ಮಕ್ಕಳಲ್ಲಿ ಅಂಕಪಟ್ಟಿಯ ಆವೇಶ ತುಂಬುತ್ತಾ ನೈತಿಕ ಹಿನ್ನಡೆಗೆ ಅವಕಾಶವಾಗಬಾರದು.ಇಂದು ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ಹಾಗೂ ಓದ್ಯೋಗಿಕ ಸ್ಪರ್ದೆ ಇದೆ. ಆದರೆ ಇದರ ಹೆಸರಿನಲ್ಲಿ ಮಕ್ಕಳು ನೈತಿಕತೆಯಿಂದ ದೂರ ಉಳಿಯುವಂತಾಗಬಾರದು. ನಮ್ಮ ಮನೆ ಹಾಗೂ ಶಾಲೆಗಳು ಸಾಂಸ್ಕೃತಿಕ ಚೈತನ್ಯವನ್ನು ಮಕ್ಕಳಲ್ಲಿ ಜಾಗೃತಿಗೊಳಿಸುವ ಅನಿವಾರ್ಯತೆ ಇದೆ. ಈ ಸಂಧರ್ಭದಲ್ಲಿ ಶಾಲೆ ಹಾಗೂ ಮನೆಗಳಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದನ್ನು ಎಲ್ಲರೂ ಬೆಂಬಲಿಸಬೇಕು. ಆಗ ಮಕ್ಕಳ ವಿದ್ಯೆಗೆ ಬೆಲೆ ಬರುತ್ತದೆ ಎಂದರು.
ಎನ್.ಎಮ್.ಎಮ್.ಎಸ್ ನೋಡಲ್ ಅಧಿಕಾರಿ ಶ್ರೀನಿವಾಸ ಮಾತನಾಡಿ ಡ್ರೀಮ ಸ್ಕೂಲ ಪೌಂಡೇಶನ ಇಡೀ ಜಿಲ್ಲೆಯ ಆಯ್ದ ಪ್ರತಿಭಾವಂತ ಮಕ್ಕಳಿಗೆ ನೀಡುತ್ತಿರುವ ಶೈಕ್ಷಣಿಕ ಮಾರ್ಗದರ್ಶನ ಈ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿಯಾಗಿದೆ. ನಮ್ಮ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದು ಪಾಲಕರಿಗೂ ಕೂಡ ಇದು ಮೆಚ್ಚುಗೆಯಾಗಿದೆ ಎಂದರು.
ಭಗತ್ ಸಂಸ್ಥೆಯ ಅಧ್ಯಕ್ಷ ಸತೀಶ ಭಾಗಣ್ಣನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಡ್ರೀಮ ಸ್ಕೂಲ ಪೌಂಡೇಶನ ಕಾರ್ಯಕ್ರಮಾಧಿಕಾರಿ ಪಿ.ಕೃತೀಕಾ, ಜಿಲ್ಲಾ ಸಂಯೋಜಕ ಪ್ರಶಾಂತ ರುದ್ರುಗೌಡರ, ರಾಣೆಬೆನ್ನೂರು ಸಂಯೋಜಕ ಅರುಣಕುಮಾರ, ಮಾಹಿತಿ ತಂತ್ರಜ್ಞಾನ ಆಡಳಿತಾಧಿಕಾರಿ ಜಗದೀಶ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 