ಕುಡಿಯುವ ನೀರಿನ ಸಮಸ್ಯೆ ಸಹಿಸುವುದಿಲ್ಲ: ಶಾಸಕ ಯಶವಂತರಾಯಗೌಡ ಪಾಟೀಲ
Drinking water problem will not be tolerated: MLA Yashwant Rayagouda Patil
ಇಂಡಿ 28: ಇಂಡಿ ಮತಕ್ಷೇತ್ರದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯದಿಂದ ಸಮಸ್ಯೆ ಎದುರಾದರೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಎಚ್ಚರಿಕೆ ನೀಡಿದರು.
ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸರ್ಕಾರಿ ನೀರಿನ ಮೂಲಗಳು ಬತ್ತಿದಲ್ಲಿ ತಕ್ಷಣವೇ ಖಾಸಗಿ ಬೋರ್ವೆಲ್ ಹಾಗೂ ಇತರೆ ನೀರಿನ ಮೂಲಗಳನ್ನು ಗುರುತಿಸಿ, ಅಗತ್ಯವಿದ್ದರೆ ಬಾಡಿಗೆ ಆಧಾರದಲ್ಲಿ ನೀರು ಪಡೆದು ಅಥವಾ ಟ್ಯಾಂಕರ್ ಮೂಲಕ ಪೂರೈಕೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಿದರು.
ಪ್ರತಿ ಸೋಮವಾರ ಟಾಸ್ಕ್ಫೋರ್ಸ್ ಸಭೆ ನಡೆಸಿ ಗ್ರಾಮವಾರು ನೀರಿನ ಪರಿಸ್ಥಿತಿಯನ್ನು ಪರೀಶೀಲಿಸಿ ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ತೆಗ್ಗೆಹಳ್ಳಿ ಗ್ರಾಮದಲ್ಲಿ ಹೊಸ ಬೋರ್ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆ ಪರಿಹರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ತಾಲೂಕಿನ ವಸತಿ ನಿಲಯಗಳು ಹಾಗೂ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಶಾಸಕರು, ಹೊರ್ತಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ನಿಲಯದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಅಂದಾಜು ಪತ್ರಿಕೆ ಸಿದ್ಧಪಡಿಸಿ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 