ಬೇಸಿಗೆ ಸಮಯ ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಶಾಸಕ ರಾಜುಗೌಡ

ಬೇಸಿಗೆ ಸಮಯ ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಶಾಸಕ ರಾಜುಗೌಡ Drinking water should not be a problem during summer: MLA Rajugowda

ದೇವರಹಿಪ್ಪರಗಿ 07 : ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಗ್ರಾಮಗಳಲ್ಲಿ ಸಮರ​‍್ಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಸಮರ​‍್ಕವಾಗಿ ನೀರು ಹರಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ  ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅಧ್ಯಕ್ಷತೆಯಲ್ಲಿ ಮತಕ್ಷೇತ್ರದ ತಾಲೂಕು ಆಡಳಿತ, ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ, ಆಡಳಿತ ಅಧಿಕಾರಿಗಳ ಟಾಸ್ಕ್‌ ಫೋರ್ಸ್‌ ಸಮಿತಿಯ ಸಭೆ ನಡೆಸಿ ಮಾತನಾಡಿದ ಅವರು,ಈಗಾಗಲೇ ಬೇಸಿಗೆ ಕಾಲ ಆರಂಭವಾಗಿದೆ. 

 ಗ್ರಾಮ ಪಂಚಾಯಿತಿಗಳಲ್ಲಿ ಆಡಳಿತದ ಅವಧಿ ಮುಗಿದಿದೆ. ಆಡಳಿತಾಧಿಕಾರಿಗಳು ಮತ್ತು ಪಂಚಾಯಿತಿ ಅಧಿಕಾರಿಗಳು ಸೇರಿ ಕುಡಿಯುವ ನೀರಿನ ಜೊತೆಗೆ ಗ್ರಾಮೀಣ ಪ್ರದೇಶದ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಶೀಘ್ರವೇ ಶಾಶ್ವತ ಪರಿಹಾರ ಕಲ್ಪಿಸಬೇಕು.ಕೊಳವೆಬಾವಿಗಳನ್ನು ದುರಸ್ತಿ ಮಾಡಿಸಬೇಕು. ಕೊಳವೆಬಾವಿಗಳಿಂದ ತಾತ್ಕಾಲಿಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು.  

ಸಮಸ್ಯೆ ಇರುವ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರು ಸರಬರಾಜು ಮಾಡಬೇಕು. ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಸಮರ​‍್ಕವಾಗಿ ನಿರ್ವಹಣೆ ಮಾಡಬೇಕು ಈ ನಿಟ್ಟಿನಲ್ಲಿ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳು ಇರಬೇಕು.ಗ್ರಾಮಗಳಲ್ಲಿನ ತೊಟ್ಟಿಗಳಲ್ಲಿ ನೀರು ಸಂಗ್ರಹಿಸಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕೆರೆಗಳಿಗೆ ನೀರು ಬಿಡುತ್ತಿದ್ದು ಅಧಿಕಾರಿಗಳು ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು ಹಾಗೂ ಕಾರ್ಯ ಪಾಲನೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. 

*ಶಾಸಕರ ಸಭೆಯಲ್ಲೇ ವಿದ್ಯುತ್ ಕಣ್ಣುಮುಚ್ಚಾಲೆ*ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಮತಕ್ಷೇತ್ರದ ಅಧಿಕಾರಿಗಳ ಟಾಸ್ಕ್‌ ಫೋರ್ಸ್‌ ಸಮಿತಿಯ ಸಭೆ ನಡೆದ ಸಂದರ್ಭದಲ್ಲಿ ಸುಮಾರು 10ಕ್ಕೂ ಹೆಚ್ಚು ಸಲ ವಿದ್ಯುತ್ ಕಣ್ಣು ಮುಚ್ಚಾಲೆ ಆಟದಿಂದ ಬೆಳಕು ಗಾಳಿ ಇಲ್ಲದೆ ಎಲ್ಲರೂ ಪರದಾಡವಂತಾಗಿತ್ತು. ಈ ಕುರಿತು ಹೆಸ್ಕಾಂ ಅಧಿಕಾರಿ ಉಮೇಶ ಪಟ್ಟಣ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದ ರೀತಿ ವಿದ್ಯುತ್ ನೀಡಬೇಕು. ಕಲಕೇರಿ ಭಾಗದಲ್ಲಿ ಹೆಸ್ಕಾಂ ಗೆ ಸಂಬಂಧಪಟ್ಟ ಹಲವಾರು ದೂರಗಳು ಬಂದಿವೆ.

ಕೂಡಲೇ ಆ ಅಧಿಕಾರಿಗೆ ನೋಟಿಸ್ ನೀಡಿ ಎಂದು ಸೂಚಿಸಿದರು.ಇದೇ ಸಂದರ್ಭದಲ್ಲಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ,ತಾ.ಪಂ ಇಒ ಭಾರತಿ ಚೆಲುವಯ್ಯ, ಪ.ಪಂ ಮುಖ್ಯಾಧಿಕಾರಿ ಅಪ್ರೋಜ ಅಹಮದ ಪಟೇಲ, ಬಾಗೇವಾಡಿ ತಹಶೀಲ್ದಾರ್ ಎ.ಡಿ.ಅಮರವಾಡಗಿ,ತಾಳಿಕೋಟಿ ತಹಶೀಲ್ದಾರ್ ವಿನಯಾ ಹೂಗಾರ, ಬಾಗೇವಾಡಿ ಇಒ ವೆಂಕಟೇಶ ವಂದಾಲ, ತಾಳಿಕೋಟಿ ಇಒ ಅನಸುಯ ಚೆಲವಾದಿ ,ಎಇಇ ಅರುಣಕುಮಾರ ವಡಗೇರಿ, ಕೃಷಿ ಇಲಾಖೆ ಅಧಿಕಾರಿ ಶರಣಗೌಡ ಬಿರಾದಾರ,ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ತಾರಾನಾಥ ರಾಠೋಡ ಸೇರಿದಂತೆ ಆಡಳಿತ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.