ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ಸಂಜೀವ ಕುಲಕರ್ಣಿ ಅವರಿಂದ ಚಾಲನೆ

ಕೊಪ್ಪಳ: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇಂದಿನಿಂದ ತಾಲ್ಲೂಕಿನಾದ್ಯಂತ ನಡೆಯಲಿರುವ ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ್ ವಿ. ಕುಲಕಣರ್ಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.  

ಇಂದಿನಿಂದ (ನವೆಂಬರ್.11 ರಿಂದ 14ರವರೆಗೆ) ಕೊಪ್ಪಳ ತಾಲ್ಲೂಕಿನಾದ್ಯಂತ ಜರುಗಲಿರುವ ಕಾನೂನು ಸಾಕ್ಷರತಾ ರಥ ಸಂಚಾರ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ನಗರದಲ್ಲಿರುವ ಜಿಲ್ಲಾ ನ್ಯಾಯಾಲಯ ಆವರಣದಿಂದ ಸೋಮವಾರದಂದು ಚಾಲನೆ ನೀಡಲಾಯಿತು.  

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ್ ವಿ. ಕುಲಕರ್ಣಿ  ಅವರು ಮಾತನಾಡಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಬಗ್ಗೆ ಸರ್ವ ಸಾಮಾನ್ಯರಿಗೂ ಅರಿವು ಮೂಡಿಸಲು ಪ್ರತಿ ವರ್ಷ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ.  ಕಾನೂನಿನ ಮೂಲಕ ಪಡೆಯಬಹುದಾದ ಸೇವೆಗಳು, ಹಕ್ಕುಗಳು ಸೇರಿದಂತೆ ಇನ್ನೂ ಅನೇಕ ವಿಧಗಳ ಕಾನೂನುಗಳ ಕುರಿತು ಅರಿವು ಮೂಡಿಸಲು ಗ್ರಾಮೀಣ, ನಗರ ಪ್ರದೇಶದಲ್ಲಿ ಕಾನೂನು ರಥ ಸಂಚರಿಸಲಿದೆ.  ಇದರ ಜೊತೆ ನಮ್ಮ ಕಾನೂನು ತಂಡವು ಸಹ ಭಾಗವಹಿಸಿ ಕಾನೂನು ಸೇವೆಗಳ ಬಗ್ಗೆ ತಿಳಿಸಲಿದೆ.  ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಆರಂಭಿಸಲಾಗಿದ್ದು, ಗಂಗಾವತಿ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿ ಕಾರ್ಯಕ್ರಮ ಈಗಾಗಲೇ ನಡೆದಿದೆ.  ಈಗ ಕೊಪ್ಪಳ ತಾಲ್ಲೂಕಿನಲ್ಲಿ ನಂತರ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮ ಜರುಗಲಿದೆ.  ಜಿಲ್ಲೆಯ ಸಾರ್ವಜನಿಕರು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಸೇವೆಗಳ ಬಗ್ಗೆ ಮಾಹಿತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.  

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಟಿ. ಶ್ರೀನಿವಾಸ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿಜೆಎಂ ಕುಮಾರ್ ಎಸ್, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ಹರೀಶ ಪಾಟೀಲ, ಜೆಎಂಎಫ್ಸಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮನುಶರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್. ಮುರಡಿ, ಜಿಲ್ಲಾ ಸಕರ್ಾರಿ ವಕೀಲ ಆಸೀಫ್ ಅಲಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.