ಬಾಗಲಕೋಟೆ: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೂರು ದಿನಗಳನ್ನು ಪೂರೈಸಿದ ರಾಜ್ಯ ಸರಕಾರದ ಅಭಿವೃದ್ದಿ ಕಾರ್ಯಕ್ರಮ ಹಾಗೂ ನೆರೆ ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಚಾಲನೆ ನೀಡಿದರು.
ಶುಕ್ರವಾರ ಜಿಲ್ಲಾಡಳಿತ ಭವನದ ಮುಖ್ಯ ದ್ವಾರದ ಆವರಣದಲ್ಲಿ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಎಸ್.ಎಸ್.ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪೂಜಾರಿ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಸರಕಾರ ಜಾರಿಗೆ ತರಲಾದ ಹಲವಾರು ಮಹತ್ವದ ಯೋಜನೆಗಳ ಮಾಹಿತಿಯನ್ನೊಳಗೊಂಡ ಈ ಛಾಯಾಚಿತ್ರ ಪ್ರದರ್ಶನದ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದರು. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.
ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಛಾಯಾಚಿತ್ರ ವೀಕ್ಷಣೆಗೆ ಆಗಮಿಸಿದ ವಿದ್ಯಾಥರ್ಿಗಳನ್ನುದ್ದೇಶಿಸಿ ಮಾತನಾಡಿದ ಅವರು ಸರಕಾರದ ಯೋಜನೆಗಳ ಅರಿವು ಅಗತ್ಯವಾಗಿದ್ದು, ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರಕಾರ ನೀಡುತ್ತಿರುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಬೇಕು. ಅಲ್ಲದೇ 18 ವರ್ಷ ಪೂರ್ಣಗೊಳ್ಳುವವರೆಗೆ ಮದುವೆಯಾಗಬಾರದೆಂದು ತಿಳಿಸಿದರು.
ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ ಮಾತನಾಡಿ ನಮ್ಮ ನಾಡು-ನುಡಿ, ಸಂಸ್ಕೃತಿ, ಪರಂಪರೆ ಹಾಗೂ ದೇಶ ಸೇವೆಗೆ ಬದ್ದರಾಗಿಬೇಕು ತಿಳಿಸಿದರು.
ಜಿಲ್ಲಾ ವಾತರ್ಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಮಾತನಾಡಿ ಸರಕಾರದ ಸಾಧನೆಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನ ಡಿಸೆಂಬರ 20 ರಿಂದ ಮೂರು ದಿನಗಳ ಕಾಲ ಬೆಳಿಗ್ಗೆಯಿಂದ ಸಂಜೆ 6 ಗಂಟೆವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಶಾಲಾ-ಕಾಲೇಜು ವಿದ್ಯಾಥರ್ಿಗಳು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು.
ಪೂರ್ವದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಗೆ ಪುಷ್ಪ ನೀಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳು ಹಾಗೂ ಸಹ ಶಿಕ್ಷಕರು ಹಾಗೂ ಮುಖ್ಯೋಪಾದ್ಯಾಯರು ಪಾಲ್ಗೊಂಡಿದ್ದರು. ಪ್ರದರ್ಶನದಲ್ಲಿ ನೇಕಾರರ ಸಾಲ ಮನ್ನಾ, ಮೀನುಗಾರರ ಸಾಲ ಮನ್ನಾ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ನೆರೆ ಪ್ರವಾಹದಲ್ಲಿ ಸರಕಾರ ಕೈಗೊಂಡ ಪರಿಹಾರ ಕಾರ್ಯಗಳ ಮಾಹಿತಿಗಳನ್ನೊಳಗೊಂಡ ಛಾಯಾಚಿತ್ರಗಳನ್ನು ಇಡಲಾಗಿತ್ತು.