ಫಿರ್ದೋಸೇ ಉಲೂಮ್ ಅರಬ್ಬಿ ಶಾಲೆ ಕಟ್ಟಡಕ್ಕೆ ತಂಗಡಗಿ ಚಾಲನೆ
Drive to Firdosay Uloom Arabic School building
ಕೊಪ್ಪಳ, ಆ.16: ನಗರದ ಫಿರ್ದೋಸ್ ಮಸೀದಿ ಆವರಣದಲ್ಲಿರುವ ಫಿರ್ದೋಸೇ ಉಲೂಮ್ ಅರಬ್ಬಿ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಶನಿವಾರ ಅಡಿಗಲ್ಲು ನೆರವೇರಿಸಿ ಚಾಲನೆ ನೀಡಿದರು.
ಈ ಹಿಂದೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದ್ದರು. ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಚಿವ ತಂಗಡಗಿ ಸೂಚಿಸಿದರು.
ಅಮ್ಜದ್ ಪಟೇಲ್ ಮಾತನಾಡಿ, ಸಮುದಾಯದ ಬೇಡಿಕೆಗೆ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸಹಕರಿಸಿದ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಮತ್ತು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಕೆ. ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಪ್ರಸನ್ನ ಗಡಾದ್, ಮೌಲಾನ ಸಿರಾಜುದ್ದೀನ್ ರಶಾದಿ, ಮಸೀದಿ ಕಮಿಟಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 