ಗಂಗಾವತಿ 10: ಎಪಿಎಂಸಿ ಪ್ರದೇಶದಲ್ಲಿರುವ ಹಮಾಲರ ಕಾಲನಿಯಲ್ಲಿ ಬಿಜೆಪಿ ನಗರಸಭೆ ಸದಸ್ಯ ಸಿಂಗನಾಳ ಉಮೇಶ ಭಾನುವಾರ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪೊಲಿಯೋ ಲಸಿಕೆ ಹಾಕುವದರ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದ್ದಾರೆ. ಅವರ ಕನಸು ನನಸು ಮಾಡಬೇಕು ಎಂದು ತಿಳಿಸಿದರು. ಅಂಗನವಾಡಿ ಕಾರ್ಯಕತರ್ೆ ಲಲಿತಾ, ಶಿವಗಂಗಮ್ಮ ಪಾಲ್ಗೊಂಡಿದ್ದರು.