ಕೊಪ್ಪಳ 19: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದಿನಿಂದ (ಜ. 19 ರಿಂದ) ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಗವಿಸಿದ್ದೇಶ್ವರ ಮಠದ ಆವರಣದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕರಡಿ ಸಂಗಣ್ಣ ಹಾಗೂ ಶ್ರೀಗಳು ಚಿಕ್ಕ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವುದರ ಮೂಲಕ ಚಾಲನೆ ನೀಡಿದರು.
ಸಂಸದ ಕರಡಿ ಸಂಗಣ್ಣ ಅವರು ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು 1995-96ರಿಂದ ಎರಡು ಸುತ್ತಿನಲ್ಲಿ ನಡೆದುಕೊಂಡು ಬಂದಿದ್ದು, ಜಿಲ್ಲೆಯು ಇಲ್ಲಿಯವರೆಗೆ ಉತ್ತಮ ಪ್ರಗತಿ ಸಾಧಿಸಿರುತ್ತದೆ. ಅಲ್ಲದೇ ಇಲ್ಲಿಯವರೆಗೆ ಕೇವಲ ಎರಡು ದೇಶಗಳು (ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ) ಮಾತ್ರ ಪೋಲಿಯೋ ಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿವೆ. ವಿಶ್ವಾದ್ಯಂತ 2018 ರಲ್ಲಿ ಒಟ್ಟಾರೆ 33 ಪೋಲಿಯೋ ಪ್ರಕರಣಗಳು ಕಂಡುಬಂದಿದ್ದು, 2019 ರಲ್ಲಿ 143 ಪ್ರಕರಣಗಳು ವರದಿಯಾಗಿವೆ. ಪಾಕಿಸ್ತಾನ(117) ಮತ್ತು ಆಫ್ಘಾನಿಸ್ತಾನದಲ್ಲಿ(26) ಪೋಲಿಯೋ ಪ್ರಕರಣಗಳು ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿರುವುದರಿಂದ ವಲಸಿಗರ ಮೂಲಕ ಪೋಲಿಯೋ ನಮ್ಮ ದೇಶಕ್ಕೆ ಹರಡುವ ಸಾಧ್ಯತೆ ಇರುವುದರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅತ್ಯಂತ ಜಾಗೃತ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗಿರುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ ಮಾತನಾಡಿ, ಭಾರತದಲ್ಲಿ ಕೊನೆಯ ಪೋಲಿಯೋ ಪ್ರಕರಣ 2011 ರ ಜನವರಿಯಲ್ಲಿ ಕಂಡು ಬಂದಿತ್ತು. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಪೋಲಿಯೋ ನಿಮರ್ೂಲನೆ ಪ್ರಮಾಣ ಪತ್ರ ದೊರೆತಿದೆ. ಭಾರತ ಸಕರ್ಾರ ನಿರ್ದೇಶನದಂತೆ ಮುಂಬರುವ ಜನವರಿ 19 ರಿಂದ ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ಬಿಒಪಿವಿ ನೀಡುವುದರ ಮೂಲಕ ನಡೆಸಲಾಗುವುದು. ಕಾರ್ಯಕ್ರಮದ ಮೊದಲನೇ ದಿನ ಪೋಲಿಯೋ ಬೂತ್ಗಳಲ್ಲಿ ಹಾಗೂ ನಂತರ 03 ದಿನಗಳಲ್ಲಿ ಮನೆ ಮನೆಯ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ನೀಡುವಂತೆ ವ್ಯವಸ್ಥೆ ಮಾಡಲಾಗಿದೆ ಹಾಗೂ ಪೋಲಿಯೋ ಖಾಯಿಲೆ ನಿಮರ್ೂಲನೆ ಮಾಡಲು ಹಲವಾರು ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳು, ನೌಕರರು, ಸ್ವಯಂ ಸೇವಕರು, ಸಮುದಾಯದ ಸಹಭಾಗಿತ್ವದೊಂದಿಗೆ ಸಾಕಷ್ಟು ಉತ್ತಮ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಹೇಳಿದರು.
ಜಿಲ್ಲೆಯ ಒಟ್ಟು 15,44,610 ಜನಸಂಖ್ಯೆಯಲ್ಲಿ 0-5 ವರ್ಷದೊಳಗಿನ ಒಟ್ಟು 1,78,350 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈ ಗುರಿಯನ್ನು ಸಾಧಿಸಲು ಜಿಲ್ಲೆಯಲ್ಲಿ ಒಟ್ಟು 878 ಬೂತ್ಗಳು. 51 ಟ್ರಾನ್ಸಿಟ್ ಟೀಮ್ಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 19 ಮೊಬೈಲ್ ಟೀಮ್ಗಳಂತೆ ಒಟ್ಟು 948 ತಂಡಗಳು ಕಾರ್ಯನಿರ್ವಹಿಸುತ್ತವೆ. ಈ ತಂಡಗಳಲ್ಲಿ ಒಟ್ಟು 1,896 ವ್ಯಾಕ್ಸಿನೇಟರ್ಗಳು ಕಾರ್ಯನಿರ್ವಹಿಸಲಿದ್ದಾರೆ. ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದರು.
ಕಾರ್ಯಕ್ರಮದಲ್ಲಿ ಆರ್ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ದಾನರೆಡ್ಡಿ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಎಸ್.ಕೆ. ದೇಸಾಯಿ, ಕ್ಷಯರೋಗ ನಿಯಂತ್ರಣಾಧಿಕಾರಿ ಮಹೇಶ ಎಂ.ಜಿ, ಆಯುಷ್ ಅಧಿಕಾರಿ ಡಾ. ಬಸವರಾಜ ಕುಕನೂರ, ಡಾ. ಕುಲಕರ್ಣಿ, ನಗರಸಭೆ ಸದಸ್ಯ ಅಮ್ಜದ್ ಪಟೇಲ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.