ಹಾವೇರಿ19: ರಾಜ್ಯದಲ್ಲಿ ಪಲ್ಸ್ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆಯು ಮಕ್ಕಳ ಅಂಗವಿಕಲತೆಯನ್ನು ತಡೆಗಟ್ಟುವಿಕೆಯಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ ಯಾವುದೇ ಒಂದು ಮಗು ಉಳಿಯದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶಾಸಕ ನೆಹರು ಓಲೇಕಾರ ಹೇಳಿದರು.
ರವಿವಾರ ನಗರದ ಜಿ.ಪಿ.ರೋಟರಿ ಪ್ರಾಥಮಿಕ ಶಾಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ಎಂ.ದೊಡ್ಡಮನಿ ಅವರು ಮಾತನಾಡಿ, ಜಿಲ್ಲೆಯಲ್ಲಿ 05 ವರ್ಷದೊಳಗಿನ 1,67,740 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. 930 ಪೋಲಿಯೋ ಬೂತ್ಗಳಲ್ಲಿ 1860 ಜನ ಲಸಿಕೆ ಹಾಕಲು ಸಿಬ್ಬಂದಿ ನಿಯೋಜಿಸಲಾಗಿದೆ.
ಈ ಬಾರಿ ವಲಸಿಗರ ಮಕ್ಕಳನ್ನು ಪತ್ತೆ ಹಚ್ಚಿ ಪೋಲಿಯೋ ಹನಿ ಹಾಕಲು ಹೆಚ್ಚು ಒತ್ತು ನೀಡಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ 2 ಹನಿ ಪೋಲಿಯೋ ಹಾಕಿ ರೋಗ ನಿಮರ್ೂಲನೆ ಮಾಡಲು ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಆರ್.ಸಿ.ಎಚ್. ಅಧಿಕಾರಿ ಡಾ.ಎಂ ಜಯಾನಂದ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸಿ.ವಿರಕ್ತಮಠ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಎಸ್. ಕುಂದೂರ, ರಾಜ್ಯ ನೋಡಲ್ ಅಧಿಕಾರಿಗಳಾದ ಡಾ. ಪ್ರಶಾಂತ , ಡಾ. ಶ್ರವಣ ಪಂಡಿತ್, ರೋಟರಿ ಸಂಸ್ಥೆಯ ಸದಸ್ಯ ವಜ್ರಕುಮಾರ ಇತರರು ಉಪಸ್ಥಿತರಿದ್ದರು.