ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ

ಗದಗ: ಸೃಷ್ಠಿ ಸಮಗ್ರ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಮಕ್ಕಳ ಹಕ್ಕುಗಳ ದಿನಾಚರಣೆ ಅಂಗವಾಗಿ ಚೈಲ್ಡ್ ಲೈನ್ಸ್ ಸೇ ದೋಸ್ತಿ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಗದಗ ಜಿಲ್ಲಾಡಳಿತ ಆವರಣದಿಂದ ಆರಂಭಗೊಂಡ ಬೈಕ್ ಜಾಥಾ ಕಾರ್ಯಕ್ರಮ ಗಾಂಧೀ ಸರ್ಕಲ್ ವರೆಗೆ ನಡೆಯಿತು.

    ಕಾರ್ಯಕ್ರಮದಲ್ಲಿ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಪೊಲೀಸ್ ಇಲಾಖೆಯ ಲೇಬರ್ ಇನ್ಸ್ಪೆಕ್ಟರ್ ಸಂಗೀತಾ ಬೆನಕನಕಟ್ಟಿ, ಕಾಮರ್ಿಕ ಇಲಾಖೆಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕಿ ಶೈಲಾ ಕುರಟ್ಟಿ, ಮಕ್ಕಳ ಸಹಾಯವಾಣಿ ಸಂಯೋಜಕರು ಎಸ್.ಎನ್.ಮಹೇಕರ್ ಇದ್ದರು.