ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

ಕೊಪ್ಪಳ: ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರ ಖೋ-ಖೋ, ಬಾಲ್ಬ್ಯಾಡ್ಮಿಂಟನ್ ಹಾಗೂ ಹ್ಯಾಂಡ್ಬಾಲ್ ಕ್ರೀಡೆಗಳ ಪಂದ್ಯಾವಳಿ ಕ್ರೀಡಾಕೂಟಕ್ಕೆ ಕೊಪ್ಪಳ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕಿ ಅಮಿತಾ ಯರಗೋಳ್ಕರ್ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಜ್ಯೋತಿ ಬೆಳಗಿಸುವುದರ ಮೂಲಕ ಶನಿವಾರದಂದು ಚಾಲನೆ ನೀಡಿದರು. 

ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟವನ್ನು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿನಿಂದ (ಅ.12 ರಿಂದ) ಹಮ್ಮಿಕೊಳ್ಳಲಾಗಿತ್ತು.  

ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ್, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಕ್ರೀಡಾ ಇಲಾಖೆಯ ಖೋಖೋ ತರಬೇತುದಾರ ಯತಿರಾಜು, ತಾಲ್ಲೂಕು ಕ್ರೀಡಾಧಿಕಾರಿ ಶರಣಬಸವ ಬಂಡಿಹಾಳ, ಸಂಗನಗೌಡ ಪೋ.ಪಾಟೀಲ್, ವಿ.ಬಿ ಗೌಡರ್ ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.  

  ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಬಿದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ತಂಡಗಳು ಭಾಗವಹಿಸಿದ್ದವು.  ಇಂದು (ಅ.12) ಖೋಖೋ ಪಂದ್ಯಾವಳಿ ನಡೆದಿದ್ದು, ನಾಳೆ (ಅ.13) ಬಾಲ್ ಬ್ಯಾಡ್ಮಿಂಟನ್ ಹಾಗೂ ಅಕ್ಟೋಬರ್. 16ರಂದು ಹ್ಯಾಂಡ್ಬಾಲ್ ಪಂದ್ಯಾವಳಿ ನಡೆಯಲಿದೆ.