ಖಾಸಗಿ ಶಾಲಾ ವಾಹನ ಪಲ್ಟಿ ಚಾಲಕನಿಗೆ ಗಾಯ
Driver injured in private school vehicle overturn
ಲೋಕದರ್ಶನ ವರದಿ
ಜಮಖಂಡಿ 10: ನಗರದ ದೇಸಾಯಿ ಬಳಿ ಪರಶುರಾಮ ಉದ್ಯಾನವನದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಭಾರಿ ಅನುಹುತ ತಪ್ಪಿದೆ. ಪಲ್ಟಿಯಾದ ವಾಹನವು ತಾಲೂಕಿನ ಸಿದ್ದಾಪುರ ಗ್ರಾಮದ ಸನದಿ ಇಂಟರ್ನ್ಯಾಷನಲ್ ಸ್ಕೂಲ್ಗೆ ಸೇರಿದ ಶಾಲಾ ವಾಹನ ಎಂದು ತಿಳಿದುಬಂದಿದೆ. ಸಿದ್ದಾಪುರ ಗ್ರಾಮದಿಂದ ಜಮಖಂಡಿ ನಗರಕ್ಕೆ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ವಾಹನದಲ್ಲಿ ಯಾವುದೇ ವಿದ್ಯಾರ್ಥಿಗಳು ಪ್ರಯಾಣಿಸುತ್ತಿರಲಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದಂತಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರಿದಿದೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 