ಸಚಿವೆ ಹೆಬ್ಬಾಳಕರ ಕಾರಿಗೆ ಲಾರಿ ಗುದ್ದಿ ಪರಾರಿಯಾಗಿದ್ದ ಚಾಲಕನ ಬಂಧನ

Driver who hit and killed Minister Hebbalaka's car and fled arrested

ಬೆಳಗಾವಿ : ಜಿಲ್ಲೆಯ ಕಿತ್ತೂರು ಪೊಲೀಸ ಠಾಣಾ ವ್ಯಾಪ್ತಿಯಲ್ಲಿನ ಅಂಬಡಗಟ್ಟಿ ಬಳಿಯಲ್ಲಿ ನಡೆದಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತದ ರಹಸ್ಯ ವನ್ನು ಬಯಲಿಗೆ ಎಳೆದಿರುವ ಕಿತ್ತೂರು ಪೊಲೀಸ್ ರು ಹೆಬ್ಬಾಳಕರ ಕಾರಿಗೆ ಗುದ್ದಿ ಫರಾರಿಯಾಗಿದ್ದ ಚಾಲಕನನ್ನು ಲಾರಿ ಸಮೇತ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

  ನೆರೆಯ ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತ ವ್ಯಕ್ತಿಯಾಗಿದ್ದಾನೆ. ಜನವರಿ 14ರಂದು ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತವಾಗಿತ್ತು.

  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಹೆಬ್ಬಾಳ್ಕರ್ ಕಾರು ಚಾಲಕ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿತ್ತು.

    ಕಾರಿಗೆ ಗುದ್ಸಿದ್ದ ಲಾರಿಯ ಬಣ್ಣ ಸೇರಿ ಸ್ಥಳದಲ್ಲಿ ಸಿಕ್ಕ ಸಾಕ್ಷಿಗಳನ್ನು ಪೊಲೀಸರು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.