ಲಾಕ್‌ಡೌನ್ ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್‍ಕಾರ್ಡ್, ಪಿಟ್‍ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ: ನಿಯಮ ಸಡಿಲಿಸಿದ ಸರ್ಕಾರ
ಬೆಂಗಳೂರು, ಮೇ 21,ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 5000 ರೂ. ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್‍ಕಾರ್ಡ್, ಪಿಟ್‍ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.ಚಾಲಕರು ಸಂಕಷ್ಟದಲ್ಲಿರುವುದನ್ನು ಕಂಡು ಮುಖ್ಯಮಂತ್ರಿಗಳು ಆಟೋ ಮತ್ತು ಕ್ಯಾಬ್ ಚಾಲಕರಿಗೆ 5000 ಸಾವಿರ ರೂ. ಹಣವನ್ನು ಪರಿಹಾರವಾಗಿ ನೀಡಲು ಉದ್ದೇಶಿಸಿ ಚಾಲಕರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ ಪ್ಯಾನ್‍ಕಾರ್ಡ್ ಮತ್ತು ಪಿಟ್‍ನೆಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿತ್ತು. ಈ ಕುರಿತು ತೀವ್ರ ವಿರೋಧ ವ್ಯಕ್ತವಾದ ಕಾರಣ ಹೊಸ ನಿಯಮ ತೆಗೆದುಹಾಕುವ ಮೂಲಕ ಚಾಲಕರಿಗೆ ಗುಡ್ ನ್ಯೂಸ್ ನೀಡಿದೆ.
ಗುರುವಾರ ವಿಕಾಸಸೌಧದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಶಾಸಕ ದಿನೇಶ್ ಗುಂಡೂರಾವ್ ಹಾಗೂ ಸಾರಿಗೆ ಆಯುಕ್ತ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಾಲಕರು ನೆರವು ಪಡೆಯಲು ಪ್ಯಾನ್‍ಕಾರ್ಡ್ ಮತ್ತು ಪಿಟ್‍ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ.
ಪರಿಹಾರ ಪಡೆಯಲು ಚಾಲಕರು ಪ್ಯಾನ್ ಕಾರ್ಡ್ ಮತ್ತು ಫಿಟ್‍ನೆಸ್ ಪತ್ರವನ್ನು ಕಡ್ಡಾಯವಾಗಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು. ಆದರೆ ಲಾಕ್‍ಡೌನ್ ಸಂದರ್ಭದಲ್ಲಿ ಪಿಟ್‍ನೆಸ್ ಪತ್ರವನ್ನು ನೀಡಲು ಕಷ್ಟಕರವಾಗಿದೆ. ಎಷ್ಟೋ ಆಟೋ ಚಾಲಕರ ಬಳಿ ಪ್ಯಾನ್ ಕಾರ್ಡ್ ಇರುವುದಿಲ್ಲ. ಇಂತಹವರಿಗೆ ಪ್ಯಾನ್ ನೀಡಲು ಕಷ್ಟವಾಗಿದೆ ಎಂದು ಚಾಲಕರ ಒಕ್ಕೂಟ ನಿಯಮ ಸಡಿಲಿಸುವಂತೆ ಆಗ್ರಹಿಸಿತ್ತು.ಈ ಎಲ್ಲಾ ಅಂಶಗಳನ್ನು ಗಮದಲ್ಲಿಟ್ಟುಕೊಂಡು ಚಾಲಕರಿಗೆ ಕೇವಲ ಡಿಎಲ್ (ಚಾಲನಾ ಪರವಾನಗಿ) ಮತ್ತು ಆಧಾರ್ ಕಾರ್ಡ್ ಪಡೆಯುವ ಮೂಲಕ ಚಾಲಕರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಚಾಲಕರ ಬೇಡಿಕೆಗೆ ಸ್ಪಂದಿಸಿದೆ ಎಂದು ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ತಿಳಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 