ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಶಾಸಕರಿಂದ ಚಾಲನೆ
ಹಾವೇರಿ: ಸಕಾಲದಲ್ಲಿ ಮಳೆ ಬಾರದೆ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕಾಲಕಾಲಕ್ಕೆ ಮಳೆ ಬಂದು ರೈತರು ಉತ್ತಮ ಬೆಳೆ ಬೆಳೆದು ಆಥರ್ಿಕವಾಗಿ ಸದೃಢರಾಗಬೇಕು ಹಾಗೂ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ಹಾವೇರಿ ತಾಲ್ಲೂಕಿನ ಕರ್ಜಗಿ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಜರುಗಿದ 2019-20 ನೇ ಸಾಲಿನ ಮುಂಗಾರು ಹಂಗಾಮಿನ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿ ಇಲಾಖೆಯಿಂದ ದೊರೆಯುವ ಎಲ್ಲಾ ಪರಿಕರಗಳನ್ನು ರೈತರ ಅಗತ್ಯಕ್ಕೆನುಗುಣವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು. ಮಳೆಯ ವಿಳಂಬವನ್ನು ಎದುರಿಸುತ್ತಿರುವ ರೈತರು ಬೀಜ ಗೊಬ್ಬರಕ್ಕಾಗಿ ತೊಂದರೆ ಅನುಭವಿಸಬಾರದು ಹಾಗೂ ಕೃಷಿ ಇಲಾಖೆ ಸೌಲಭ್ಯಗಳು ರೈತರಿಗೆ ಸರಳವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.
ಜಂಟಿ ಕೃಷಿ ನಿದರ್ೇಶಕ ಮಂಜುನಾಥ ಬಿ. ಅವರು ಮಾತನಾಡಿ, ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಮಳೆಯ ಅಭಾವವಿರುವ ಕಾರಣ ರೈತರು ಬೆಳೆಗಳಿಗೆ ಬೆಳೆವಿಮೆ ಕಡ್ಡಾಯವಾಗಿ ಮಾಡಿಸಬೇಕು.
ಸಾವಯವ ಕೃಷಿಯ ಪದ್ಧತಿ ಆಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆದು ಆಥರ್ಿಕವಾಗಿ ಸದೃಢರಾಗಲು ಸಲಹೆ ನೀಡಿದರು. ರೈತರಿಗೆ ಮಣ್ಣು ಆರೋಗ್ಯ ಚೀಟಿಗಳನ್ನು ವಿತರಿಸಲಾಗುತ್ತಿದ್ದು ಆದರ ಅನುಸಾರ ರಸಗೊಬ್ಬರವನ್ನು ಬಳಕೆ ಮಾಡಬೇಕೆಂದು ಸಲಹೆ ನೀಡಿದರು.
ಸಹಾಯಕ ಕೃಷಿ ನಿದರ್ೆಶಕ ಕರಿಯಲ್ಲಪ್ಪ ಡಿ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗಿದದ್ದು, ಯಾವದೇ ರೀತಿ ಕೊರೆತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ ಬೇಕಾಗುವಷ್ಟು ರಸಗೊಬ್ಬರದ ದಾಸ್ತಾನು ಇದ್ದು, ಯಾವುದೇ ರೀತಿ ರಸಗೊಬ್ಬರದ ಕೊರತೆ ಇರುವುದಿಲ್ಲವೆಂದು ಹೇಳಿದರು.
ತಾಲ್ಲೂಕಿನಲ್ಲಿ ಒಟ್ಟು 16 ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಅದರಲ್ಲಿ ಮೂರು ಹೋಬಳಿಯ ರೈತ ಸಂಪರ್ಕ ಕೇಂದ್ರಗಳು ಇನ್ನೂಳಿದ 13 ಉಪ ಕೇಂದ್ರಗಳನ್ನು ತೆರೆದು ರೈತರಿಗೆ ಸಕಾಲದಲ್ಲಿ ಬಿತ್ತನೆ ಬೀಜ ವಿತರಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ನಿದರ್ೇಶಕ ಬಸವರಾಜ ಡೊಂಕಣ್ಣನವರ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶಿವಪುತ್ರಪ್ಪ ನೀಲಪ್ಪ ಶಿವಣ್ಣನವರ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷಕ ಸಂಗಮೇಶ ಸುಳ್ಳಳ್ಳಿ, ಕೃಷಿಕ ಸಮಾಜದ ನಿದರ್ೇಶಕ ಗುಡ್ಡಪ್ಪ ಮಾಳಶೆಟ್ಟಿ, ನಾಗರಾಜ ವಿಭೂತಿ, ತಾಲ್ಲೂಕು ಕೃಷಿಕ ಸಮಾಜ ಮತ್ತು ಮುಖಂಡರಾದ ಛಾವಡಿ ವಕೀಲರು, ನಿಂಗಣ್ಣ ಮೈಲಾರ, ಅಧಿಕಾರಿಗಳಾದ ಡಿ.ಪಿ.ದೊಡ್ಡಮನಿ, ಆತ್ಮ ಅಧಿಕಾರಿ ಚಂದ್ರಗೌಡ ಹೊಸಗೌಡ್ರ ಮತ್ತು ರೈತ ಅನುವುಗಾರರು, ರೈತ ಬಾಂಧವರು, ಕೃಷಿ ಅಧಿಕಾರಿ ಕೊಟ್ರೇಶ್ ಗೆಜ್ಲಿ ಅವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 