ಹಾವೇರಿ: ನಮ್ಮ ಸಂಸ್ಕೃತಿಯಲ್ಲಿ ಹಿರಿಯರಿಗೆ ಪೂಜ್ಯ ಸ್ಥಾನವಿದೆ. ಹಿರಿಯರಿಗೆ ಗೌರವ ನೀಡುವ ಮೂಲಕ ಅವರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕು ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.
ನಗರದ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಜರುಗಿದ ಹಿರಿಯ ನಾಗರಿಕರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪಧರ್ೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರು ಜೀವನದಲ್ಲಿ ಸಾಕಷ್ಟು ಅನುಭವ ಹೊಂದಿರುತ್ತಾರೆ, ಅವರ ಮಾರ್ಗದರ್ಶನ ಇಂದಿನ ಸಮಾಜಕ್ಕೆ ಅಗತ್ಯವಾಗಿದೆ. ಯುವ ಪೀಳಿಗೆ ಹಿರಿಯ ಮಾರ್ಗದರ್ಶನದಲ್ಲಿ ಮುನ್ನಡೆಯುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.
ವಯಸ್ಸು ದೇಹಕ್ಕೆ ಆಗುತ್ತದೆ, ಮನಸ್ಸು ಪ್ರಫುಲ್ವಾಗಿದ್ದಾರೆ ವಯಸ್ಸಿನ ತೊಡಕು ಉಂಟಾಗುವುದಿಲ್ಲ. ಹಿರಿಯ ನಾಗರಿಕರು ನಿತ್ಯ ವಾಯು ವಿವಾಹ, ಲಘು ವ್ಯಾಯಾಮ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸಕರ್ಾರ ಹಿರಿಯ ನಾಗರಿಕರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ರಾಮಕೃಷ್ಣ ಪಡಗಣ್ಣನವರ, ಜಿಲ್ಲಾ ನಿವೃತ್ತ ನೌಕರರ ಸಂಘದ ನಿವೃತ್ತ ಕೃಷಿ ಅಧಿಕಾರಿ ಎಸ್.ಬಿ.ಅಣ್ಣಿಗೇರಿ, ನಗರಸಭಾ ಸದಸ್ಯೆ ಶ್ರೀಮತಿ ಕವಿತಾ ರಾಜಣ್ಣ ಶಿವಪುರ, ವೀರಣ್ಣಗೌಡ ಹಾಗೂ ಇತರರು ಉಪಸ್ಥಿತರಿದ್ದರು.